ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೋಷ್‌ ಟ್ರೋಫಿ: ಬಿ ಗುಂಪಿನಲ್ಲಿ ಕರ್ನಾಟಕ

Published 30 ನವೆಂಬರ್ 2023, 16:00 IST
Last Updated 30 ನವೆಂಬರ್ 2023, 16:00 IST
ಅಕ್ಷರ ಗಾತ್ರ

ನವದೆಹಲಿ: 2024ರ ಫೆಬ್ರುವರಿ 21ರಿಂದ ಮಾರ್ಚ್‌ 9ರವರೆಗೆ ಅರುಣಾಚಲ ಪ್ರದೇಶದಲ್ಲಿ ನಡೆಯಲಿರುವ ಸಂತೋಷ್‌ ಟ್ರೋಫಿ ಫುಟ್‌ಬಾಲ್‌ ಟೂರ್ನಿಯಲ್ಲಿ ಹಾಲಿ ಚಾಂಪಿಯನ್‌ ಕರ್ನಾಟಕ ತಂಡವು ‘ಬಿ’ ಗುಂಪಿನಲ್ಲಿ ಇರಲಿದೆ.

ಟೂರ್ನಿಯಲ್ಲಿ 12 ತಂಡಗಳು ಪಾಲ್ಗೊಳ್ಳಲಿದ್ದು, ಎರಡು ಗುಂಪಿನಲ್ಲಿ ತಲಾ ಆರು ತಂಡಗಳಿವೆ. ‘ಎ’ ಗುಂಪಿನಲ್ಲಿ ಗೋವಾ, ಅರುಣಾಚಲ ಪ್ರದೇಶ, ಮೇಘಾಲಯ, ಅಸ್ಸಾಂ, ಸರ್ವಿಸಸ್‌ ಮತ್ತು ಕೇರಳ ತಂಡಗಳಿದ್ದರೆ, ಬಿ ಗುಂಪಿನಲ್ಲಿ ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಮಣಿಪುರ, ಮಿಜೊರಾಂ ಮತ್ತು ರೈಲ್ವೇಸ್‌ ತಂಡಗಳು ಇವೆ. ಗುಂಪು ಹಂತದಲ್ಲಿ ಮೊದಲ ನಾಲ್ಕು ಸ್ಥಾನ ಪಡೆಯುವ ತಂಡಗಳು ಕ್ವಾರ್ಟರ್‌ ಫೈನಲ್‌ ಪ್ರವೇಶಿಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT