ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Most International Goals: ರೊನಾಲ್ಡೊ, ಮೆಸ್ಸಿ ಸಾಲಿನಲ್ಲಿ ಚೆಟ್ರಿ

Published 22 ಜೂನ್ 2023, 7:31 IST
Last Updated 22 ಜೂನ್ 2023, 7:31 IST
ಅಕ್ಷರ ಗಾತ್ರ

ಬೆಂಗಳೂರು: ನಾಯಕ ಸುನಿಲ್‌ ಚೆಟ್ರಿ ಅವರ ಹ್ಯಾಟ್ರಿಕ್ ಗೋಲುಗಳ ನೆರವಿನಿಂದ ಭಾರತ ತಂಡ, ಸ್ಯಾಫ್ ಫುಟ್ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಶುಭಾರಂಭ ಮಾಡಿಕೊಂಡಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬುಧವಾರ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡವು 4-0 ಗೋಲು ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಸುನಿಲ್ ಚೆಟ್ರಿ ಸಾಧನೆ...

ಇದರೊಂದಿಗೆ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 90 ಗೋಲುಗಳನ್ನು ಗಳಿಸಿರುವ ಚೆಟ್ರಿ, ಫುಟ್ಬಾಲ್ ಇತಿಹಾಸದಲ್ಲೇ ಅತಿ ಹೆಚ್ಚು ಗೋಲು ಗಳಿಸಿದ ಸಾರ್ವಕಾಲಿಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ನೆಗೆತ ಕಂಡಿದ್ದಾರೆ.

ಈ ಮೂಲಕ ಅರ್ಜೆಂಟೀನಾದ ಲಯೊನೆಲ್ ಮೆಸ್ಸಿ, ಪೋರ್ಚುಗಲ್‌ನ ಕ್ರಿಸ್ಟಿಯಾನೋ ರೊನಾಲ್ಡೊ ಸಾಲಿಗೆ ಸೇರ್ಪಡೆಗೊಂಡರು.

ಅಂತರರಾಷ್ಟ್ರೀಯ ಫುಟ್ಬಾಲ್ ಇತಿಹಾಸದಲ್ಲಿ ಅತಿ ಹೆಚ್ಚು ಗೋಲು ಗಳಿಸಿದ ಆಟಗಾರರ ಪಟ್ಟಿ ಇಂತಿದೆ:

  • ಕ್ರಿಸ್ಟಿಯಾನೊ ರೊನಾಲ್ಡೊ (ಪೋರ್ಚುಗಲ್): 123

  • ಅಲಿ ದೋಯಿ (ಇರಾನ್): 109

  • ಲಯೊನೆಲ್ ಮೆಸ್ಸಿ (ಅರ್ಜೆಂಟೀನಾ): 103

  • ಸುನಿಲ್ ಚೆಟ್ರಿ (ಭಾರತ): 90

  • ಮೋಖ್ತರ್ ದಹಾರಿ (ಮಲೇಷ್ಯಾ): 89

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT