ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ನಿವೃತ್ತಿ ಘೋಷಿಸಿದ ಸುನೀಲ್ ಚೆಟ್ರಿ

Published 16 ಮೇ 2024, 5:22 IST
Last Updated 16 ಮೇ 2024, 5:22 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಫುಟ್‌ಬಾಲ್‌ ತಂಡದ ನಾಯಕ ಸುನೀಲ್ ಚೆಟ್ರಿ ನಿವೃತ್ತಿ ಘೋಷಣೆ ಮಾಡಿದ್ದಾರೆ. ಜೂನ್ 6 ರಂದು ಕೋಲ್ಕತ್ತಾದಲ್ಲಿ ಕುವೈತ್ ವಿರುದ್ಧ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯದ ನಂತರ ಅಂತರರಾಷ್ಟ್ರೀಯ ಫುಟ್‌ಬಾಲ್‌ನಿಂದ ನಿವೃತ್ತಿ ಪಡೆಯುವುದಾಗಿ ಪ್ರಕಟಿಸಿದ್ದಾರೆ. ಈ ಮೂಲಕ ಎರಡು ದಶಕಗಳ ಅದ್ಭುತ ವೃತ್ತಿಜೀವನಕ್ಕೆ ತೆರೆ ಎಳೆಯುತ್ತಿದ್ದಾರೆ.

ದೀರ್ಘಕಾಲ ಸೇವೆ ಸಲ್ಲಿಸಿದ ರಾಷ್ಟ್ರೀಯ ತಂಡದ ನಾಯಕ ಎಂಬ ಖ್ಯಾತಿ ಗಳಿಸಿರುವ ಸುನೀಲ್‌ ಅವರು ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ವಿಡಿಯೊ ಪೋಸ್ಟ್ ಮಾಡುವ ಮೂಲಕ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಸುನೀಲ್‌ ಅವರು ಮಾರ್ಚ್‌ನಲ್ಲಿ ಅಫ್ಗಾನಿಸ್ತಾನದ ವಿರುದ್ಧ ಗುವಾಹಟಿಯಲ್ಲಿ ಭಾರತದ ಪರವಾಗಿ 150ನೇ ಫುಟ್‌ಬಾಲ್‌ ಪಂದ್ಯವಾಡಿದ್ದರು. ಇದರಲ್ಲಿ 1–2 ಗೋಲುಗಳ ಅಂತರದಲ್ಲಿ ಭಾರತ ಸೋಲು ಕಂಡಿತ್ತು. 

2005ರಲ್ಲಿ ಸುನೀಲ್‌ ಫುಟ್‌ಬಾಲ್‌ಗೆ ಪದಾರ್ಪಣೆ ಮಾಡಿದ್ದರು. ಅವರು ಭಾರತದ ಸಾರ್ವಕಾಲಿಕ ಟಾಪ್ ಸ್ಕೋರರ್ ಮತ್ತು ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರ ಎನಿಸಿಕೊಂಡಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ ಮತ್ತು ಲಿಯೋನೆಲ್ ಮೆಸ್ಸಿಯ ನಂತರ ಸಕ್ರಿಯ ಆಟಗಾರರಲ್ಲಿ ಗೋಲು ಗಳಿಸಿದವರ ಪಟ್ಟಿಯಲ್ಲಿ ಸುನೀಲ್‌ ಮೂರನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT