ಬೆಂಗಳೂರು: ಅಭಿಲಾಶ್ ಗಳಿಸಿದ ಏಕೈಕ ಗೋಲಿನ ಬಲದಿಂದ ಬೆಂಗಳೂರು ಈಗಲ್ಸ್ ಎಫ್‌ಸಿ ತಂಡ ಬೆಂಗಳೂರು ಜಿಲ್ಲಾ ಫುಟ್‌ಬಾಲ್ ಸಂಸ್ಥೆ (ಬಿಡಿಎಫ್‌ಎ) ಆಶ್ರಯದ ಸೂಪರ್ ಡಿವಿಷನ್ ಲೀಗ್ ಫುಟ್‌ಬಾಲ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಗೆದ್ದಿದೆ.

ಅಶೋಕನಗರದಲ್ಲಿರುವ ಬೆಂಗಳೂರು ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಹಣಾಹಣಿಯಲ್ಲಿ ಈಗಲ್ಸ್ ಎಫ್‌ಸಿ 1–0 ಗೋಲಿನಿಂದ ಓಜೋನ್ ಎಫ್‌ಸಿ ಬೆಂಗಳೂರು ತಂಡವನ್ನು ಪರಾಭವಗೊಳಿಸಿತು.

ಉಭಯ ತಂಡಗಳು ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾದವು. ಹೀಗಾಗಿ ಮೊದಲ 10 ನಿಮಿಷಗಳ ಆಟ ಗೋಲು ರಹಿತವಾಗಿತ್ತು. ಇದರ ಬೆನ್ನಲ್ಲೇ (11ನೇ ನಿ.) ಈಗಲ್ಸ್ ತಂಡದ ಅಭಿಲಾಶ್ ಕಾಲ್ಚಳಕ ತೋರಿದರು.

ಸಹ ಆಟಗಾರ ತಮ್ಮತ್ತ ಒದ್ದು ಕಳುಹಿಸಿದ ಚೆಂಡಿನ ಮೇಲೆ ಚುರುಕಾಗಿ ನಿಯಂತ್ರಣ ಸಾಧಿಸಿದ ಅವರು ಅದನ್ನು ಕಣ್ಣೆವೆ ಮುಚ್ಚಿ ತೆರೆಯುವುದರೊಳಗೆ ಗುರಿ ಮುಟ್ಟಿಸಿ ಸಂಭ್ರಮಿಸಿದರು.

ನಂತರದ ಅವಧಿಯಲ್ಲಿ ಉಭಯ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸಿದವು. ಹೀಗಾಗಿ ಯಾರಿಗೂ ಗೋಲು ಗಳಿಸಲು ಆಗಲಿಲ್ಲ. ದ್ವಿತೀಯಾರ್ಧದಲ್ಲೂ ತುರುಸಿನ ಪೈಪೋಟಿ ಕಂಡುಬಂತು. ರಕ್ಷಣಾ ವಿಭಾಗದಲ್ಲಿ ಪರಿಣಾಮಕಾರಿ ಸಾಮರ್ಥ್ಯ ತೋರಿದ ಈಗಲ್ಸ್ ಎಫ್‌ಸಿ ಖುಷಿಯ ಕಡಲಲ್ಲಿ ತೇಲಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.