ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ₹ 14. 34 ಲಕ್ಷ ಕೋಟಿ ಅನುದಾನ

Last Updated 1 ಫೆಬ್ರುವರಿ 2018, 13:32 IST
ಅಕ್ಷರ ಗಾತ್ರ

ನವದೆಹಲಿ: ಗ್ರಾಮೀಣ ಭಾಗದ ಮೂಲಸೌಕರ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ₹ 14.34 ಲಕ್ಷ ಕೋಟಿ ಅನುದಾನ ಘೋಷಿಸಲಾಗಿದೆ.

‘ಉದ್ಯೋಗ ಸೃಷ್ಟಿಸುವುದರ ಜತೆಗೆ, ಈ ಹೂಡಿಕೆಯಿಂದ 3.71 ಲಕ್ಷ ಕಿ.ಮೀ. ರಸ್ತೆ ನಿರ್ಮಾಣ, 51 ಲಕ್ಷ ಹೊಸ ಮನೆ, 1.88 ಕೋಟಿ ಶೌಚಾಲಯ, 1.75 ಕೋಟಿ ಮನೆಗಳಿಗೆ ಹೊಸತಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುವುದು’ ಎಂದು ಬಜೆಟ್‌ನಲ್ಲಿ ಉಲ್ಲೇಖಿಸಲಾಗಿದೆ.

ರಾಷ್ಟ್ರೀಯ ಗ್ರಾಮೀಣ ಜೀವನೋಪಯೋಗ ಕಾರ್ಯಕ್ರಮಕ್ಕೆ (ಎನ್‌ಆರ್‌ಎಲ್‌ಎಂ) ನೀಡಿರುವ ಅನುದಾನವನ್ನು ₹ 4,500 ಕೋಟಿಯಿಂದ ₹ 5,750 ಕೋಟಿಗೆ ಏರಿಕೆ ಮಾಡಲಾಗಿದೆ.

2016–17ರಲ್ಲಿ ಮಹಿಳಾ ಸ್ವಸಹಾಯ ಗುಂಪುಗಳಿಗೆ ₹ 42,500 ಕೋಟಿ ಸಾಲ ವಿತರಿಸಲಾಗಿತ್ತು. ಮುಂದಿನ ವರ್ಷದ ಮಾರ್ಚ್‌ ಒಳಗೆ ಈ ಮೊತ್ತವನ್ನು ₹ 75 ಸಾವಿರ ಕೋಟಿಗೆ ಹೆಚ್ಚಿಸಲಾಗುವುದು’ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.

</p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT