ಸೋಮವಾರ, ಏಪ್ರಿಲ್ 6, 2020
19 °C

ಟಾರ್ಚ್‌ ರಿಲೆ: ಹಿಂದೆ ಸರಿದ ನವೊಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಟೋಕಿಯೊ (ರಾಯಿಟರ್ಸ್‌): ಜಪಾನ್ ಅಂತರರಾಷ್ಟ್ರೀಯ ಫುಟ್‌ಬಾಲ್‌ ತಂಡದ ಆಟಗಾರ್ತಿ ನವೊಮಿ ಕವಾಸುಮಿ ಅವರು ಒಲಿಂಪಿಕ್‌ ಜ್ಯೋತಿ ಯಾತ್ರೆಯಿಂದ (ಟಾರ್ಚ್‌ ರಿಲೆ) ಹಿಂದೆ ಸರಿದಿದ್ದಾರೆ.

ಅವರು ಸೋಮವಾರ ಈ ವಿಷಯವನ್ನು ಖಚಿತಪಡಿಸಿದ್ದಾರೆ. 2011ರ ಮಹಿಳಾ ಫುಟ್‌ಬಾಲ್‌ ವಿಶ್ವಕಪ್‌ನಲ್ಲಿ ಜಪಾನ್‌ ಪ್ರಶಸ್ತಿ ಗೆದ್ದಾಗ 34 ವರ್ಷ ವಯಸ್ಸಿನ ಕವಾಸುಮಿ ತಂಡದಲ್ಲಿ ಆಡಿದ್ದರು. ಆ ಟೂರ್ನಿಯಲ್ಲಿ ಎರಡು ಗೋಲುಗಳನ್ನೂ ದಾಖಲಿಸಿದ್ದರು. 2012ರ ಲಂಡನ್‌ ಒಲಿಂಪಿಕ್ಸ್‌ ಹಾಗೂ 2015ರ ವಿಶ್ವಕಪ್‌ನಲ್ಲಿ ಬೆಳ್ಳಿಯ ಪದಕಗಳನ್ನು ಜಯಿಸಿದ್ದ ಜಪಾನ್‌ ತಂಡದಲ್ಲೂ ಅವರು ಆಡಿದ್ದರು. 

ರಾಷ್ಟ್ರೀಯ ಮಹಿಳಾ ಫುಟ್‌ಬಾಲ್‌ ಲೀಗ್‌ನಲ್ಲಿ ಅವರು ನ್ಯೂ ಜೆರ್ಸಿಯ ಸ್ಕೈ ಬ್ಲೂ ಎಫ್‌ಸಿ ಕ್ಲಬ್‌ ತಂಡವನ್ನು ಪ್ರತಿನಿಧಿಸುತ್ತಾರೆ.  ‘ಕೊರೊನಾ ಮಹಾಮಾರಿ ಇಡೀ ವಿಶ್ವವನ್ನೇ ತಲ್ಲಣಗೊಳಿಸುತ್ತಿದೆ. ಸಹ ಆಟಗಾರ್ತಿಯರು ಹಾಗೂ ಅಭಿಮಾನಿಗಳ ಜೀವದ ಜೊತೆ ಆಟ ಆಡಲು ನಾನು ಸಿದ್ಧಳಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ವೈಯಕ್ತಿಕ ಹಾಗೂ ಇತರರ ‌ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ಹೀಗಾಗಿ ಒಲಿಂಪಿಕ್ಸ್‌ ಜ್ಯೋತಿ ಯಾತ್ರೆಯಲ್ಲಿ ಪಾಲ್ಗೊಳ್ಳದಿರಲು ತೀರ್ಮಾನಿಸಿದ್ದೇನೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು