ಮಂಗಳವಾರ, ಆಗಸ್ಟ್ 3, 2021
27 °C
ಯೂರೊ ಕಪ್ ಫುಟ್‌ಬಾಲ್ ಚಾಂಪಿಯನ್‌ಷಿಪ್‌ ಫೈನಲ್‌ ವೀಕ್ಷಣೆಗೆ 60 ಸಾವಿರ ಮಂದಿ

ಯೂರೊ ಕಪ್ ಫುಟ್‌ಬಾಲ್ ಚಾಂಪಿಯನ್‌ಷಿಪ್‌: ಇಟಲಿಯ ಸಾವಿರ ಪ್ರೇಕ್ಷಕರಿಗೆ ಅವಕಾಶ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ಯೂರೊ ಕಪ್ ಫುಟ್‌ಬಾಲ್ ಚಾಂಪಿಯನ್‌ಷಿಪ್‌ನ ಫೈನಲ್ ಪಂದ್ಯ ವೀಕ್ಷಿಸಲು ಇಟಲಿಯ ಒಂದು ಸಾವಿರ ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಬ್ರಿಟನ್ ಸಾರಿಗೆ ಸಚಿವಾಲಯದ ಕಾರ್ಯದರ್ಶಿ ಗ್ರ್ಯಾಂಟ್ ಶಪ್ಸ್‌ ಶುಕ್ರವಾರ ತಿಳಿಸಿದ್ದಾರೆ.

ಕೊರೊನಾ ಆತಂಕಗಳು ದೂರವಾದ ಹಿನ್ನೆಲೆಯಲ್ಲಿ, ವಿದೇಶದಿಂದ ಮರಳುವ ಇಂಗ್ಲೆಂಡ್ ನಿವಾಸಿಗಳು ಎರಡು ಡೋಸ್ ಲಸಿಕೆ ಪಡೆದಿದ್ದರೆ ಹೆಚ್ಚು ಕಾಲ ಪ್ರತ್ಯೇಕವಾಸದಲ್ಲಿ ಇರಬೇಕಾದ ಅಗತ್ಯವಿಲ್ಲ ಎಂದು ಬ್ರಿಟನ್ ಸರ್ಕಾರ ಗುರುವಾರ ತಿಳಿಸಿದೆ. ಆದರೆ ಯುರೋಪಿಯನ್ ಚಾಂಪಿಯನ್‌ಷಿಪ್ ಫೈನಲ್‌ಗೆ ಇಟಲಿ ಪ್ರೇಕ್ಷಕರು ಬರಬಹುದೇ ಎಂಬ ಸಂದೇಹ ಉಳಿದಿತ್ತು.

ಭಾನುವಾರ ರಾತ್ರಿ ನಡೆಯಲಿರುವ ಫೈನಲ್‌ನಲ್ಲಿ ಆತಿಥೇಯ ಇಂಗ್ಲೆಂಡ್ ಮತ್ತು ಇಟಲಿ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ. 60 ಸಾವಿರ ಪ್ರೇಕ್ಷಕರು ಪಂದ್ಯ ವೀಕ್ಷಿಸುವ ನಿರೀಕ್ಷೆ ಇದೆ. ಈ ನಡುವೆ ಜುಲೈ 19ರಿಂದ ನಿರ್ಬಂಧಗಳನ್ನು ಸಡಿಲಿಸಲು ಮತ್ತು ಫುಟ್‌ಬಾಲ್ ಪಂದ್ಯಕ್ಕೆ ಭಾರಿ ಸಂಖ್ಯೆಯಲ್ಲಿ ಪ್ರೇಕ್ಷಕರನ್ನು ಬಿಡಲು ನಿರ್ಧರಿಸಿರುವುದಕ್ಕೆ ವಿಜ್ಞಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ತೀರ್ಮಾನದಿಂದ ಕೊರೊನಾ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. 

ಫೈನಲ್ ಪಂದ್ಯ ವೀಕ್ಷಿಸಲು ಇಟಲಿ ಫುಟ್‌ಬಾಲ್ ಪ್ರೇಮಿಗಳು ವಿಶೇಷ ವಿಮಾನದಲ್ಲಿ ಬರಲಿದ್ದಾರೆ. 12 ತಾಸು ಮಾತ್ರ ಅವರು ಇಲ್ಲಿ ಇರಲಿದ್ದು ವೆಂಬ್ಲಿ ಕ್ರೀಡಾಂಗಣದಲ್ಲಿ ಅವರಿಗಾಗಿ ಪ್ರತ್ಯೇಕ ವಲಯವನ್ನು ಗೊತ್ತುಮಾಡಲಾಗುವುದು ಎಂದು ಶಪ್ಸ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು