ನವದೆಹಲಿ: ಭಾರತ ತಂಡದವರು ಟರ್ಕಿಯ ಅಲನ್ಯದಲ್ಲಿ ನಡೆಯುತ್ತಿರುವ ಟರ್ಕಿಸ್ ಮಹಿಳಾ ಕಪ್ ಫುಟ್ಬಾಲ್ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ನಿರಾಸೆ ಕಂಡಿದ್ದಾರೆ.

ಬುಧವಾರ ನಡೆದ ಪಂದ್ಯದಲ್ಲಿ ಭಾರತ 0–1 ಗೋಲಿನಿಂದ ಉಜ್ಬೆಕಿಸ್ತಾನಕ್ಕೆ ಶರಣಾಯಿತು.

ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಅಣಿಯಾದ ಉಜ್ಬೆಕಿಸ್ತಾನ ತಂಡ ನಾಲ್ಕನೇ ನಿಮಿಷದಲ್ಲಿ ಖಾತೆ ತೆರೆಯಿತು. ಬುರ್ಹಾನೊವಾ ಮಲಿಕಾ ಚೆಂಡನ್ನು ಗುರಿ ಮುಟ್ಟಿಸಿದರು.

ನಂತರ ಭಾರತ ತಂಡ ಸಮಬಲದ ಗೋಲು ಗಳಿಸಲು ಸಾಕಷ್ಟು ಶ್ರಮಿಸಿತು. ಚೆಂಡನ್ನು ಗುರಿ ಮುಟ್ಟಿಸಲು ಸಿಕ್ಕ ಹಲವು ಅವಕಾಶಗಳನ್ನು ಹಾಳುಮಾಡಿಕೊಂಡ ತಂಡ ನಿರಾಸೆಯ ಕಡಲಲ್ಲಿ ಮುಳುಗಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.