ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌

Published 10 ಅಕ್ಟೋಬರ್ 2023, 16:50 IST
Last Updated 10 ಅಕ್ಟೋಬರ್ 2023, 16:50 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆಯ ಆಶ್ರಯದಲ್ಲಿ 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ ಇದೇ 11ರಿಂದ 15ರವರೆಗೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕಳೆದ ಬಾರಿಯ ಚಾಂಪಿಯನ್‌ ಇಂಡಿಯನ್‌ ರೈಲ್ವೇಸ್‌, ಎಲ್‌ಐಸಿ, ಒಎನ್‌ಜಿಸಿ, ಐಒಸಿ ಸೇರಿದಂತೆ ವಿವಿಧ ಸಂಸ್ಥೆಗಳಿಂದ ಮತ್ತು ವಿವಿಧ ರಾಜ್ಯಗಳಿಂದ ಮೂವತ್ತಕ್ಕೂ ಹೆಚ್ಚು ತಂಡಗಳು ಕೂಟದಲ್ಲಿ ಪಾಲ್ಗೊಳ್ಳಲಿವೆ.

ಪುರುಷ ಮತ್ತು ಮಹಿಳಾ ವಿಭಾಗಗಳಿಂದ ಸುಮಾರು 1200 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಭಾರತ ಅಥ್ಲೆಟಿಕ್ಸ್‌ ಒಕ್ಕೂಟ ನಿಗದಿಪಡಿಸಿದ ಅರ್ಹತಾ ಅಂಕವನ್ನು ಪಡೆಯಲಿದ್ದಾರೆ.

ಒಲಿಂಪಿಕ್ಸ್, ಕಾಮನ್‌ವೆಲ್ತ್ ಕ್ರೀಡಾಕೂಟ, ಏಷ್ಯನ್ ಕ್ರೀಡಾಕೂಟ ಮತ್ತು ಇತರ ಪ್ರಮುಖ ಅಂತರರಾಷ್ಟ್ರೀಯ ಕೂಟಗಳ ಪದಕ ವಿಜೇತರು ಸೇರಿದಂತೆ ಅಂತರರಾಷ್ಟ್ರೀಯ ಕ್ರೀಡಾಪಟುಗಳು ಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಮಾಹಿತಿಗೆ ಮೊ: 9448438276

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT