ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಏಷ್ಯನ್‌ ಸ್ನೂಕರ್‌ ಚಾಂಪಿಯನ್‌ಷಿಪ್‌: ಕೀರ್ತನಾಗೆ ಕಂಚು

Published 6 ಜುಲೈ 2024, 0:29 IST
Last Updated 6 ಜುಲೈ 2024, 0:29 IST
ಅಕ್ಷರ ಗಾತ್ರ

ಕೋಲಾರ: ಕೆಜಿಎಫ್‌ನ ಕೀರ್ತನಾ ಪಾಂಡಿಯನ್‌ ಶುಕ್ರವಾರ ಸೌದಿ ಅರೇಬಿಯಾದ ರಿಯಾದ್‌ನಲ್ಲಿ ನಡೆದ ಏಷ್ಯನ್‌ ಸ್ನೂಕರ್‌ ಚಾಂಪಿಯನ್‌ಷಿಪ್‌ನ ಮಹಿಳೆಯರ ವಿಭಾಗದಲ್ಲಿ ಕಂಚಿನ ಪದಕ ಜಯಿಸಿದ್ದಾರೆ.

ಈ ಹಿಂದೆ ಜೂನಿಯರ್‌ (21 ವರ್ಷದೊಳಗಿನವರು) ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದ ಕೀರ್ತನಾ ಸೀನಿಯರ್‌ ಮಟ್ಟದಲ್ಲಿ ಪಾಲ್ಗೊಂಡ ಮೊದಲ ಟೂರ್ನಿ ಇದಾಗಿದೆ.

ಈ ಚಾಂಪಿಯನ್‌ಷಿಪ್‌ನಲ್ಲಿ ಚೆನ್ನೈನ ಆಟಗಾರ್ತಿ ಅನುಪಮಾ ರಾಮಚಂದ್ರನ್‌ ಚಿನ್ನದ ಪದಕ ಜಯಿಸಿದ್ದಾರೆ. 

ಇದೇ ಚಾಂಪಿಯನ್‌ಷಿಪ್‌ನ ಜೂನಿಯರ್‌ ವಿಭಾಗದಲ್ಲಿ 2023ರಲ್ಲಿ ಕೀರ್ತನಾ ಚಾಂಪಿಯನ್‌ ಆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT