ನವದೆಹಲಿ: ಆನ್‌ಲೈನ್ ಸೆಮಿನಾರ್‌ನಲ್ಲಿ ಪಾಲ್ಗೊಂಡಿದ್ದ ತಾಂತ್ರಿಕ ಅಧಿಕಾರಿಗಳಿಗೆ ಆನ್‌ಲೈನ್‌ನಲ್ಲೇ ಪ್ರಮಾಣ ಪತ್ರ ಸಿಗುವಂತಹ ವ್ಯವಸ್ಥೆಯನ್ನು ಭಾರತ ಅಥ್ಲೆಟಿಕ್ಸ್ ಫೆಡರೇಷನ್ (ಎಎಫ್‌ಐ) ಮಾಡಿದೆ.

ಎಎಫ್‌ಐ ಹಾಗೂ ದಕ್ಷಿಣ ಏಷ್ಯಾ ಅಥ್ಲೆಟಿಕ್ಸ್ ಫೆಡರೇಷನ್‌ನ ಸಹಯೋಗದಲ್ಲಿಏಪ್ರಿಲ್ 25ರಿಂದ 30ರವರೆಗೆ ನಡೆದಿದ್ದ ಸೆಮಿನಾರ್‌ನಲ್ಲಿ 1,000 ಮಂದಿ ಪಾಲ್ಗೊಂಡಿದ್ದರು.

‘ತಾಂತ್ರಿಕ ಅಧಿಕಾರಿಗಳ ಜ್ಞಾನವನ್ನು ವೃದ್ಧಿಸುವ ಹಾಗೂ ಅವರಿಗೆ ಹೊಸ ವಿಷಯಗಳನ್ನು ಪರಿಚಯಿಸುವ ಸದುದ್ದೇಶದಿಂದ ಆಯೋಜಿಸಿದ್ದ ಆನ್‌ಲೈನ್ ಸೆಮಿನಾರ್‌ಗೆ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಕೊರೊನಾ ವೈರಾಣುವಿನ ಉಪಟಳದಿಂದಾಗಿ ಪರಿಸ್ಥಿತಿ ಬಿಗಡಾಯಿಸಿದೆ. ಹೀಗಾಗಿ ಆನ್‌ಲೈನ್‌ನಲ್ಲೇ ಪ್ರಮಾಣ ಪತ್ರಗಳು ಸಿಗುವಂತೆ ವ್ಯವಸ್ಥೆ ಮಾಡಿದ್ದೇವೆ. ಸೆಮಿನಾರ್‌ನಲ್ಲಿ ಭಾಗವಹಿಸಿದ್ದವರು ಅವುಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು’ ಎಂದು ಎಎಫ್‌ಐ ಅಧ್ಯಕ್ಷ ಆದಿಲ್ ಸುಮರಿವಾಲಾ ಭಾನುವಾರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.