ಅಫಜಲಪುರ: ‘ಪ್ರಸ್ತುತ ವರ್ಷ ಮುಂಗಾರು ಮಳೆ ಒಂದು ವಾರ ಮುಂಚಿತವಾಗಿ ಆರಂಭವಾಗಲಿದ್ದು, ಹಾಗಾಗಿ ಕೃಷಿ ಇಲಾಖೆಯವರು ಮುಂಗಾರು ಹಂಗಾಮಿಗೆ ಬೇಕಾಗಿರುವ ಬಿತ್ತನೆ ಬೀಜ, ಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಪ್ರಾಂತ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಶ್ರೀಮಂತ ಬಿರಾದಾರ ಹಾಗೂ ಪ್ರಧಾನ ಕಾರ್ಯದರ್ಶಿ ಗುರು ಚಾಂದಕೋಟೆ ಹೇಳಿದರು.

ಈ ಕುರಿತು ಭಾನುವಾರ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಅವರು, ‘ಕಳೆದ ವರ್ಷ ರೈತರು ಅತಿವೃಷ್ಟಿಯಿಂದಾಗಿ ಕಷ್ಟದಲ್ಲಿದ್ದಾರೆ ಮತ್ತು ಬೆಳೆ ಪರಿಹಾರ ನಿರೀಕ್ಷಿತ ಮಟ್ಟದಲ್ಲಿ ಬಂದಿಲ್ಲ. ಅದಕ್ಕಾಗಿ ಸರ್ಕಾರ ಹೆಚ್ಚಿನ ಸಹಾಯಧನದಲ್ಲಿ ಗುಣಮಟ್ಟದ ಬಿತ್ತನೆ ಬೀಜವನ್ನು ನೀಡಬೇಕು’ ಎಂದು ಮನವಿ ಮಾಡಿದರು.

‘ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಧನದಲ್ಲಿ ಬಿತ್ತನೆ ಬೀಜವನ್ನು ವಿತರಿಸಲು ಎಫ್ಐಡಿ ನಂಬರ್ ಕಡ್ಡಾಯ ಮಾಡಿದ್ದು, ಎಫ್ಐಡಿ ಇಲ್ಲದ ರೈತರು ಕೃಷಿ ಇಲಾಖೆಯಿಂದ ಎಫ್ಐಡಿ ನಂಬರ್ ಪಡೆದುಕೊಳ್ಳಬೇಕು. ಕೃಷಿ ಇಲಾಖೆಯವರು ಉದ್ದು, ಹೆಸರು, ಸೂರ್ಯಕಾಂತಿ ಬಿತ್ತನೆಯ ಬೀಜವನ್ನು ಸಂಗ್ರಹಿಸಿಡಬೇಕು’ ಎಂದು ತಿಳಿಸಿದರು.

‘ತಾಲ್ಲೂಕಿನಲ್ಲಿ ಕೆಲವು ಖಾಸಗಿ ಆಗ್ರೋ ಕೇಂದ್ರಗಳು ದುಬಾರಿ ಬೆಲೆಗೆ ಡಿಎಪಿ ಹಾಗೂ ಯೂರಿಯಾ ರಸಗೊಬ್ಬರಗಳನ್ನು ಮಾರಾಟ ಮಾಡುವ ಸಾಧ್ಯತೆ ಇರುತ್ತದೆ. ಅದರ ಬಗ್ಗೆ ಕೃಷಿ ಇಲಾಖೆಯವರು ನಿಗಾವಹಿಸಬೇಕು. ವಿತರಿಸುವ ಬಿತ್ತನೆ ಬೀಜಗಳಿಗೆ ಕಡ್ಡಾಯವಾಗಿ ರಶೀದಿ ನೀಡುವ ವ್ಯವಸ್ಥೆ ಮಾಡಬೇಕು’ ಎಂದು ಹೇಳಿದರು.

‘ಕೆಲವರು ತಮ್ಮಲ್ಲಿ ಕೆಲವು ರಸಗೊಬ್ಬರಗಳನ್ನು ತೆಗೆದುಕೊಂಡರೆ ಮಾತ್ರ ರೈತರಿಗೆ ಡಿಎಪಿ ಹಾಗೂ ಯೂರಿಯಾ ರಸಗೊಬ್ಬರ ಕೊಡುವುದಾಗಿ ಶರತ್ತು ಹಾಕುತ್ತಾರೆ. ಇದರ ಬಗ್ಗೆ ಕೃಷಿ ಇಲಾಖೆಯವರು ಗಮನಹರಿಸಬೇಕು. ಸರ್ಕಾರ ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಅವುಗಳನ್ನು ಬೇಗನೆ ಭರ್ತಿ ಮಾಡಿಕೊಳ್ಳಬೇಕು’ ಎಂದು ಶ್ರೀಮಂತ ಬಿರಾದಾರ ಹಾಗೂ ಗುರು ಚಾಂದಕೋಟೆ ಅವರು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-31-651411755

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.