ನವದೆಹಲಿ: ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್ ಮಾರ್ಚ್ 17ರಿಂದ 21ರವರೆಗೆ ಬರ್ಮಿಂಗ್‌ಹ್ಯಾಮ್‌ನಲ್ಲಿ ನಿಗದಿಯಾಗಿದ್ದು, ಪಂದ್ಯಗಳ ಡ್ರಾ ಪ್ರಕಟಿಸಲಾಗಿದೆ. ಹಾಲಿ ವಿಶ್ವ ಚಾಂಪಿಯನ್ ಭಾರತದ ಪಿ.ವಿ.ಸಿಂಧು ಅವರಿಗೆ ಟೂರ್ನಿಯ ಕ್ವಾರ್ಟರ್‌ಫೈನಲ್‌ವರೆಗೆ ತಲುಪಲು ಹಾದಿ ಸರಳವಾಗಿದೆ. ಆದರೆ ಇನ್ನೋರ್ವ ಆಟಗಾರ್ತಿ ಸೈನಾ ನೆಹ್ವಾಲ್ ಅವರಿಗೆ ಮೊದಲ ಸುತ್ತಿನಲ್ಲೇ ಕಠಿಣ ಸವಾಲು ಎದುರಾಗಿದೆ.

ಮಾರ್ಚ್ 3ರಿಂದ ನಡೆಯಲಿರುವ ಸ್ವಿಸ್ ಓಪನ್ ಬಳಿಕ ಈ ವರ್ಷ ಆಯೋಜನೆಯಾಗಲಿರುವ ಎರಡನೇ ಟೂರ್ನಿ ಆಲ್ ಇಂಗ್ಲೆಂಡ್ ಚಾಂಪಿಯನ್‌ಷಿಪ್. ಟೋಕಿಯೊ ಒಲಿಂಪಿಕ್ಸ್‌ಗೆ ರ‍್ಯಾಂಕಿಂಗ್ ಪಾಯಿಂಟ್ಸ್ ಗಳಿಸಲು ಇಲ್ಲಿ ಅವಕಾಶವಿದೆ.

ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ (ಬಿಡಬ್ಲ್ಯುಎಫ್) ಮಂಗಳವಾರ ಬಿಡುಗಡೆ ಮಾಡಿರುವ ಡ್ರಾ ಪ್ರಕಾರ, ಸಿಂಧು ಅವರು ಮಹಿಳಾ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನಲ್ಲಿ ಮಲೇಷ್ಯಾದ ಸೋನಿಯಾ ಚಿಯಾ ಅವರನ್ನು ಎದುರಿಸಲಿದ್ದಾರೆ. ಆರಂಭಿಕ ಸುತ್ತುಗಳಲ್ಲಿ ಗೆದ್ದು ಎಂಟರಘಟ್ಟಕ್ಕೆ ತಲುಪಿದರೆ ಜಪಾನ್‌ನ ಅಕಾನೆ ಯಮಗುಚಿ, ಸೆಮಿಫೈನಲ್‌ನಲ್ಲಿ ಸ್ಪೇನ್‌ನ ಕರೋಲಿನಾ ಮರಿನ್ ಅವರಿಗೆ ಮುಖಾಮುಖಿಯಾಗುವ ಸಾಧ್ಯತೆಯಿದೆ.

ಟೂರ್ನಿಯಲ್ಲಿ ಮರಿನ್ ಅವರಿಗೆ ಅಗ್ರ ಶ್ರೇಯಾಂಕ ನೀಡಲಾಗಿದ್ದು, ಸಿಂಧು ಅವರ ಶ್ರೇಯಾಂಕ ಐದು.

ಲಂಡನ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸೈನಾ ಅವರು ಮೊದಲ ಪಂದ್ಯದಲ್ಲಿ ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಟ್ ಎದುರು ಸೆಣಸಲಿದ್ದಾರೆ. ಪುರುಷರ ಸಿಂಗಲ್ಸ್ ವಿಭಾಗದಲ್ಲಿ, ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ಪರುಪಳ್ಳಿ ಕಶ್ಯಪ್ ಅವರಿಗೂ ಕಠಿಣ ಸವಾಲು ಎದುರಾಗಿದೆ. ಮೊದಲ ಹಣಾಹಣಿಯಲ್ಲಿ ಅವರು ವಿಶ್ವ ಕ್ರಮಾಂಕದಲ್ಲಿ ಅಗ್ರ ಸ್ಥಾನದಲ್ಲಿರುವ, ಜಪಾನ್‌ನ ಕೆಂಟೊ ಮೊಮೊಟಾ ವಿರುದ್ಧ ಆಡಲಿದ್ದಾರೆ.

ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಇತರ ಪಂದ್ಯಗಳಲ್ಲಿ ಕಿದಂಬಿ ಶ್ರೀಕಾಂತ್ ಅವರು ಇಂಡೊನೇಷ್ಯಾದ ಟಾಮಿ ಸುಗಿಯಾರ್ತೊ ಎದುರು, ಬಿ.ಸಾಯಿ ಪ್ರಣೀತ್ ಅವರು ಫ್ರಾನ್ಸ್‌ನ ಟೋಮಾ ಜೂನಿಯರ್ ಪೊಪೊಯ್ ಎದುರು ಕಣಕ್ಕಿಳಿಯಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.