ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಸ್ಕ್ವಾಷ್ ಚಾಂಪಿಯನ್‌ಷಿಪ್‌: ಅನಾಹತ್ ಸಿಂಗ್‌ಗೆ ಪ್ರಶಸ್ತಿ

Published 23 ನವೆಂಬರ್ 2023, 16:13 IST
Last Updated 23 ನವೆಂಬರ್ 2023, 16:13 IST
ಅಕ್ಷರ ಗಾತ್ರ

ಚೆನ್ನೈ: ಉದಯೋನ್ಮುಖ ಆಟಗಾರ್ತಿ ಅನಾಹತ್ ಸಿಂಗ್ ಅವರು ಇಲ್ಲಿ ಗುರುವಾರ ನಡೆದ ರಾಷ್ಟ್ರೀಯ ಸ್ಕ್ವಾಷ್ ಚಾಂಪಿಯನ್‌ಷಿಪ್‌ನ ಮಹಿಳೆಯರ ಸಿಂಗಲ್ಸ್‌ನಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.

ಫೈನಲ್‌ ಪಂದ್ಯದಲ್ಲಿ ಅವರು 9-11, 11-4 (ನಿವೃತ್ತ)ರಿಂದ ತನ್ವಿ ಖನ್ನಾ ಅವರನ್ನು ಸೋಲಿಸಿದರು. ಮೊದಲ ಗೇಮ್‌ನಲ್ಲಿ ಅನಾಹತ್‌ ಸೋತರೂ ಎರಡನೇ ಗೇಮ್‌ನಲ್ಲಿ ಪುಟಿದೆದ್ದು ಮೈಲುಗೈ ಸಾಧಿಸಿದರು. ಈ ಹಂತದಲ್ಲಿ ಗಾಯದಿಂದಾಗಿ ತನ್ವಿ ಹಿಂದೆ ಸರಿದ ಕಾರಣ ಅನಾಹತ್‌ಗೆ ಅದೃಷ್ಟ ಒಲಿಯಿತು.

15 ವರ್ಷದ ಅನಾಹತ್‌ ಅವರು ಈ ಸಾಧನೆ ಮಾಡಿದ ಎರಡನೇ ಕಿರಿಯ ಆಟಗಾರ್ತಿ ಎನಿಸಿಕೊಂಡರು. 2000ರಲ್ಲಿ ಜೋಶ್ನಾ ಚಿಣ್ಣಪ್ಪ ಅವರು 14ನೇ ವಯಸ್ಸಿನಲ್ಲಿ ಪ್ರಶಸ್ತಿ ಗೆದ್ದಿದ್ದರು.

ಪುರುಷರ ಸಿಂಗಲ್ಸ್‌ನಲ್ಲಿ ಸ್ಥಳೀಯ ನೆಚ್ಚಿನ ಆಟಗಾರ ವೆಲವನ್ ಸೆಂಥಿಲ್‌ಕುಮಾರ್ ಅವರು 12-10, 11-3, 12-10ರಿಂದ ಅಭಯ್‌ ಸಿಂಗ್‌ ಅವರನ್ನು ಮಣಿಸಿ ಚಾಂಪಿಯನ್‌ ಆಗಿ ಹೊರಹೊಮ್ಮಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT