ಢಾಕಾ: ಅನುಭವಿ ಸ್ಪರ್ಧಿ ಜ್ಯೋತಿ ಸುರೇಖಾ ವೆನ್ನಂ ಮುಂಚೂಣಿಯಲ್ಲಿದ್ದ ಭಾರತ ಕಾಂಪೌಂಡ್ ಆರ್ಚರಿ ತಂಡ ಏಷ್ಯನ್ ಚಾಂಪಿಯನ್ಷಿಪ್ನಲ್ಲಿ ಗುರುವಾರ ಅಮೋಘ ಪ್ರದರ್ಶನ ನೀಡಿ ಮೂರು ಚಿನ್ನ ಮತ್ತು ಎರಡು ಬೆಳ್ಳಿ ಪದಕಗಳನ್ನು ಬಾಚಿಕೊಂಡಿತು.

29 ವರ್ಷ ವಯಸ್ಸಿನ ಜ್ಯೋತಿ ಅವರು ಕಾಂಪೌಂಡ್ ವಿಭಾಗದಲ್ಲಿ ವೈಯಕ್ತಿಕ ಚಿನ್ನ ಗೆದ್ದರಲ್ಲದೇ, ತಂಡ ವಿಭಾಗದಲ್ಲೂ ಚಿನ್ನ ಗೆಲ್ಲಲು ನೆರವಾದರು.

ದೀಪ್ಶಿಕಾ, ಪ್ರತೀಕಾ ಪ್ರದೀಪ್ ಅವರ ಜೊತೆಗೂಡಿದ ಜ್ಯೋತಿ ತಂಡ ವಿಭಾಗದ ಫೈನಲ್ನಲ್ಲಿ 236–234 ರಿಂದ ದಕ್ಷಿಣ ಕೊರಿಯಾವನ್ನು (ಪಾರ್ಕ್ ಯೆರಿನ್, ಒಹ್ ಯೂಹ್ಯುನ್, ಜುಂಗ್ಯೂನ್ ಪಾರ್ಕ್) ಸೋಲಿಸಲು ನೆರವಾದರು.

ಭಾರತೀಯ ಬಿಲ್ಗಾರ್ತಿಯರ ವ್ಯವಹಾರವಾಗಿದ್ದ ವೈಯಕ್ತಿಕ ಫೈನಲ್ನಲ್ಲಿ ಜ್ಯೋತಿ, 17 ವರ್ಷ ವಯಸ್ಸಿನ ಪ್ರತೀಕಾ ಅವರಿಂದ ಕಠಿಣ ಸವಾಲು ಎದುರಿಸಿದರೂ ಅಂತಿಮವಾಗಿ 147–145ರಲ್ಲಿ ಗೆದ್ದರು.

ಕಾಂಪೌಂಡ್ ಮಿಶ್ರ ವಿಭಾಗದ ಫೈನಲ್ನಲ್ಲಿ ಅಭಿಷೇಕ್ ವರ್ಮಾ– ದೀಪ್ಶಿಕಾ ಜೋಡಿ 153–151 ರಿಂದ ಬಾಂಗ್ಲಾದೇಶದ ಜೋಡಿಯನ್ನು ಸೋಲಿಸಿ ಭಾರತ ಮತ್ತೊಂದು ಚಿನ್ನ ತನ್ನದಾಗಿಸಿಕೊಂಡಿತು.

ಕಾಂಪೌಂಡ್ ತಂಡ ವಿಭಾಗದ ಫೈನಲ್ನಲ್ಲಿ ಭಾರತ 229–230ರಲ್ಲಿ ಕಜಾಕಸ್ತಾನ ತಂಡಕ್ಕೆ ಸೋತು ಬೆಳ್ಳಿ ಪದಕ ಗಳಿಸಿತು. ಅಭಿಷೇಕ್ ವರ್ಮಾ, ಸಾಹಿಲ್ ರಾಜೇಶ್ ಜಾಧವ್, ಪ್ರಥಮೇಶ ಬಾಲಚಂದ್ರ ಫುಗೆ ತಂಡದಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.