ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಷ್ಯನ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌: ಬೆಂಗಳೂರಿನ ಲತಾಗೆ ನಾಲ್ಕು ಚಿನ್ನ

Published 12 ಮೇ 2024, 15:09 IST
Last Updated 12 ಮೇ 2024, 15:09 IST
ಅಕ್ಷರ ಗಾತ್ರ

ಬೆಂಗಳೂರು: ಇಲ್ಲಿನ ರಾಜಾಜಿನಗರದ ಲತಾ ಜಿ. ನಟರಾಜ್ ಅವರು ಹಾಂಗ್‌ಕಾಂಗ್‌ನಲ್ಲಿ ಈಚೆಗೆ ನಡೆದ ಏಷ್ಯನ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನ ಮಾಸ್ಟರ್ಸ್ (84 ಕೆಜಿ ಮೇಲಿನವರ) ವಿಭಾಗದಲ್ಲಿ ನಾಲ್ಕು ಚಿನ್ನ ಸೇರಿದಂತೆ ಐದು ಪದಕಗಳನ್ನು ಗೆದ್ದಿದ್ದಾರೆ.

ಸ್ಕ್ವಾಟ್, ಬೆಂಚ್‌ಪ್ರೆಸ್ ಮತ್ತು ಡೆಡ್‌ಲಿಫ್ಟ್‌ನ ವೈಯಕ್ತಿಕ ವಿಭಾಗದಲ್ಲಿ ಅವರು ಚಾಂಪಿಯನ್‌ ಆದರು. ಇದು ಅವರಿಗೆ ಎರಡನೇ ಅಂತರರಾಷ್ಟ್ರೀಯ ಪದಕವಾಗಿದೆ.

2023ರ ಅಕ್ಟೋಬರ್‌ನಲ್ಲಿ ಮಂಗೋಲಿಯಾದ ಉಲ್ಲನ್‌ಬತಾರ್‌ನಲ್ಲಿ ನಡೆದ ವಿಶ್ವ ಪವರ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಅವರು ಬೆಳ್ಳಿ ಪದಕವನ್ನು ಗೆದಿದ್ದರು.

ಬೆಂಗಳೂರಿನ ಎಲ್‌.ಎ. ಪವರ್‌ಲಿಫ್ಟಿಂಗ್ ಮತ್ತು ಫಿಟ್‌ನೆಸ್ ಕ್ಲಬ್‌ನಲ್ಲಿ ತರಬೇತುದಾರರಾದ ಅವರು ಪವರ್‌ಲಿಫ್ಟಿಂಗ್ ಇಂಡಿಯಾ (ಪಿಐ) ಅಧ್ಯಕ್ಷ ಸತೀಶ್ ಕುಮಾರ್ ಕುದ್ರೋಳಿ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT