ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌: ಆಯುಷ್‌ ಶೆಟ್ಟಿ ಸೆಮಿಫೈನಲ್ ಪ್ರವೇಶ

Published 7 ಅಕ್ಟೋಬರ್ 2023, 15:35 IST
Last Updated 7 ಅಕ್ಟೋಬರ್ 2023, 15:35 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಆಯುಷ್‌ ಶೆಟ್ಟಿ ಅವರು ಅಮೆರಿಕದಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್‌ ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಬಾಲಕರ ಸಿಂಗಲ್ಸ್‌ನಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದಾರೆ. ಆದರೆ, ಮಹಿಳೆಯ ಸಿಂಗಲ್ಸ್‌ನಲ್ಲಿ ತಾರಾ ಶಾ ನಿರಾಸೆ ಅನುಭವಿಸಿದರು.

ಶನಿವಾರ ನಡೆದ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಜಪಾನ್‌ನ ಯುಡೈ ಒಕಿಮೊಟೊ ಅವರನ್ನು 21–16, 21–17ರಿಂದ ಮಣಿಸಿ ಮುನ್ನಡೆದ ಅವರು, ಕನಿಷ್ಠ ಕಂಚಿನ ಪದಕವನ್ನು ಖಚಿತಪಡಿಸಿದ್ದಾರೆ. ಭಾನುವಾರ ನಡೆಯುವ ನಾಲ್ಕರ ಘಟ್ಟದ ಪಂದ್ಯದಲ್ಲಿ ಅವರು ಇಂಡೊನೇಷ್ಯಾದ ಅಲ್ವಿ ಫರ್ಹಾನ್ ಅವರ ಸವಾಲನ್ನು ಎದುರಿಸಲಿದ್ದಾರೆ.

ಮಹಿಳೆಯ ಸಿಂಗಲ್ಸ್‌ನಲ್ಲಿ ತಾರಾ ಶಾ ಅವರು 17–21, 6–21ರಿಂದ ಚೀನಾದ ಕ್ಸು ವೆನ್ ಜಿಂಗ್ ಅವರಿಗೆ ಮಣಿದರು.

ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತ ಈ ಹಿಂದೆ ಒಂದು ಚಿನ್ನ, 4 ಬೆಳ್ಳಿ ಮತ್ತು 5 ಕಂಚು ಗೆದ್ದಿತ್ತು. ಕಳೆದ ಆವೃತ್ತಿಯಲ್ಲಿ ಶಂಕರ್ ಮುತ್ತುಸಾಮಿ ಅವರು ಪುರುಷರ ಸಿಂಗಲ್ಸ್‌ನಲ್ಲಿ ಬೆಳ್ಳಿ ಗೆದ್ದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT