ಭಾರತ ಕುಸ್ತಿ ಫೆಡರೇಷನ್ ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಏಳು ಮಂದಿ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದು ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೆಲ ತಿಂಗಳ ಹಿಂದೆ ದೇಶದ ಪ್ರಮುಖ ಮಹಿಳಾ ಕುಸ್ತಿಪಟುಗಳು ದೆಹಲಿಯ ಜಂತರ್‌ಮಂಥರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಮಾತನಾಡುವಾಗ, ‘ಪ್ರತಿಭಟನೆ ವಿರೋಧಿಸಲು ದಹಿಯಾ ಅವರಿಗೇ ವಿಶ್ವಾಸಾರ್ಹತೆ ಇಲ್ಲ. ಅವರೇ ಅತ್ಯಾಚಾರ ಪ್ರಕರಣ ಎದುರಿಸುತ್ತಿದ್ದಾರೆ’ ಎಂದು ಬಜರಂಗ್ ಹೇಳಿದ್ದರು. ಇದರ ವಿರುದ್ಧ ದಹಿಯಾ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.