ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ಯಾಸ್ಕೆಟ್‌ಬಾಲ್‌: ತಮಿಳುನಾಡು, ಉತ್ತರ ಪ್ರದೇಶ ಚಾಂಪಿಯನ್

Last Updated 27 ಜನವರಿ 2023, 15:42 IST
ಅಕ್ಷರ ಗಾತ್ರ

ಬೆಂಗಳೂರು: ತಮಿಳುನಾಡು ಮತ್ತು ಉತ್ತರ ಪ್ರದೇಶ ತಂಡಗಳು 72ನೇ ರಾಷ್ಟ್ರೀಯ ಜೂನಿಯರ್‌ ಬ್ಯಾಸ್ಕೆಟ್‌ಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಕ್ರಮವಾಗಿ ಬಾಲಕಿಯರ ಮತ್ತು ಬಾಲಕರ ವಿಭಾಗಗಳಲ್ಲಿ ಚಾಂಪಿಯನ್‌ ಆದವು.

ಕಂಠೀರವ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಬಾಲಕಿಯರ ವಿಭಾಗದ ಫೈನಲ್‌ನಲ್ಲಿ ತಮಿಳುನಾಡು ತಂಡ 101–32 ಪಾಯಿಂಟ್ಸ್‌ಗಳಿಂದ ಛತ್ತೀಸ್‌ಗಢ ತಂಡವನ್ನು ಮಣಿಸಿತು. ಎ.ನಿಕಿತಾ 25 ಮತ್ತು ಕೆ.ಸತ್ಯಾ 23 ಪಾಯಿಂಟ್ಸ್‌ ತಂದಿತ್ತರು.

ಬಾಲಕರ ವಿಭಾಗದ ಫೈನಲ್‌ನಲ್ಲಿ ಉತ್ತರ ಪ್ರದೇಶ 82–61 ರಲ್ಲಿ ರಾಜಸ್ಥಾನ ವಿರುದ್ಧ ಗೆದ್ದಿತು. 31 ಪಾಯಿಂಟ್ಸ್‌ ಗಳಿಸಿದ ಕುಶಾಲ್‌ ಸಿಂಗ್ ಅವರು ಉತ್ತರ ಪ್ರದೇಶ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಕರ್ನಾಟಕಕ್ಕೆ 6ನೇ ಸ್ಥಾನ: ಕರ್ನಾಟಕದ ಬಾಲಕರು ಟೂರ್ನಿಯಲ್ಲಿ ಆರನೇ ಸ್ಥಾನ ಗಳಿಸಿದರು. 5 ಮತ್ತು 6ನೇ ಸ್ಥಾನವನ್ನು ನಿರ್ಣಯಿಸಲು ನಡೆದ ಪಂದ್ಯದಲ್ಲಿ ಮಧ್ಯಪ್ರದೇಶ 69–66 ರಲ್ಲಿ ಕರ್ನಾಟಕ ತಂಡವನ್ನು ಮಣಿಸಿತು.

9 ರಿಂದ 16ನೇ ಸ್ಥಾನ ನಿರ್ಣಯಿಸುವ ಪಂದ್ಯದಲ್ಲಿ ಕರ್ನಾಟಕ ಬಾಲಕಿಯರು 76–52 ರಲ್ಲಿ ಹರಿಯಾಣ ತಂಡವನ್ನು ಸೋಲಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT