ಬೆಂಗಳೂರು: ಪ್ಯಾರಾಲಿಂಪಿಕ್ಸ್ ಅವಳಿ ಕಂಚಿನ ಪದಕ ವಿಜೇತೆ ಪ್ರೀತಿ ಪಾಲ್ ಗುರುವಾರ ಇಲ್ಲಿ ಮುಕ್ತಾಯಗೊಂಡ ಎಂಟನೇ ಆವೃತ್ತಿಯ ಇಂಡಿಯನ್ ಓಪನ್ ಅಂತರರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನಲ್ಲಿ ಮಹಿಳೆಯರ 200 ಮೀಟರ್ (ಟಿ35) ಓಟದಲ್ಲಿ ತಮ್ಮದೇ ರಾಷ್ಟ್ರೀಯ ದಾಖಲೆಯನ್ನು ಉತ್ತಮಪಡಿಸಿಕೊಂಡರು.

ಉತ್ತರ ಪ್ರದೇಶದ ಈ ಪ್ಯಾರಾ ಅಥ್ಲೀಟ್ 29.33 ಸೆಕೆಂಡ್ಗಳಲ್ಲಿ ಗುರಿ ತಲುಪಿ ಚಿನ್ನ ಗೆದ್ದರು. 30.01 ಸೆಕೆಂಡ್ ಅವರ ಈ ಹಿಂದಿನ ರಾಷ್ಟ್ರೀಯ ದಾಖಲೆಯ ಸಮಯವಾಗಿತ್ತು. ಅವರು 100 ಮೀ. (ಟಿ35) ಓಟದಲ್ಲೂ (13.94 ಸೆ) ರಾಷ್ಟ್ರೀಯ ದಾಖಲೆಯೊಂದಿಗೆ ಸ್ವರ್ಣ ಗೆದ್ದಿದ್ದಾರೆ.

ಕರ್ನಾಟಕದ ಅಥ್ಲೀಟ್ ಶರತ್ ಎಂ.ಎಸ್. ಅವರು ಪುರುಷರ 5,000 ಮೀ (ಟಿ12/ಟಿ 13) ಸ್ಪರ್ಧೆಯನ್ನು 16 ನಿ. 28.00 ಸೆಕೆಂಡ್ಗಳಲ್ಲಿ ಕ್ರಮಿಸಿ ಬೆಳ್ಳಿ ಪದಕ ಗೆದ್ದರು. ಕೂಟದ ಮೊದಲ ದಿನ ಅವರು 1500 ಮೀ (ಟಿ 13) ಸ್ಪರ್ಧೆಯಲ್ಲಿ ಚಿನ್ನ ಗೆದ್ದಿದ್ದರು.

ಪುರುಷರ ಲಾಂಗ್ಜಂಪ್ (ಟಿ11) ಸ್ಪರ್ಧೆಯಲ್ಲಿ ರಕ್ಷಿತ್ ಎಚ್. ಸೋಮಶೇಖರ 5.01 ಮೀ. ಸಾಧನೆ ಯೊಂದಿಗೆ ಕಂಚಿನ ಪದಕ ಗೆದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-43-931687059

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.