ಬೆಂಗಳೂರು: ದೈಹಿಕ ಶಿಕ್ಷಣ ತಜ್ಞ ಮತ್ತು ಅಂತರರಾಷ್ಟ್ರೀಯ ಅಥ್ಲೀಟ್ ಭರತ್ ಆರ್. ಎ. ಅವರು ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಹಾಗೂ ಭಾರತೀಯ ದೈಹಿಕ ಶಿಕ್ಷಣ ಪ್ರತಿಷ್ಠಾನವು ನೀಡುವ ‘ರಾಷ್ಟ್ರೀಯ ಖೇಲ್ ಪ್ರೋತ್ಸಾಹ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.

ದೆಹಲಿಯ ಎನ್.ಡಿ.ಎಂ.ಸಿ ಸಭಾಂಗಣದಲ್ಲಿ ಈಚೆಗೆ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಹರ್ಷ್ ಮಲ್ಹೋತ್ರಾ ಪ್ರಶಸ್ತಿ ಪ್ರದಾನ ಮಾಡಿದರು. ಕೆ.ಆರ್.ಪುರ ಮೂಲದ ಭರತ್ ಅವರು ಎರಡು ದಶಕಗಳಿಂದ ಕ್ರೀಡಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರಿಗಾಗಿ ಮೀಸಲಾದ ‘ಡಾ.ಜಿ.ಪಿ. ಗೌತಮ್ ಪ್ರಶಸ್ತಿ’ಯನ್ನು ಅವರು ಸ್ವೀಕರಿಸಿದರು. ಈ ಗೌರವಕ್ಕೆ ಪಾತ್ರರಾದ ರಾಜ್ಯದ ಮೊದಲ ದೈಹಿಕ ಶಿಕ್ಷಣ ತಜ್ಞ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಪ್ರಸ್ತುತ ಮಂಡ್ಯದ ಜೆ.ಎಸ್.ಎಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.