ನವದೆಹಲಿ (ಪಿಟಿಐ): ಚೆಸ್ ಒಲಿಂಪಿಯಾಡ್‌ನಲ್ಲಿ ಮೊದಲ ಬಾರಿ ಚಿನ್ನ ಗೆದ್ದ ತಂಡದಲ್ಲಿ ಗಮನ ಸೆಳೆಯುವ ಪ್ರದರ್ಶನ ನೀಡಿದ್ದ ವಿದಿತ್ ಗುಜರಾತಿ, ಅವರು ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಭೇಟಿಯ ಉದ್ದೇಶದಿಂದ, ಅಜರ್‌ಬೈಜಾನ್‌ನ ಬಾಕುವಿನಲ್ಲಿ ಬುಧವಾರ ಆರಂಭವಾದ 10ನೇ ವುಗರ್ ಗಶಿಮೋವ್ ಮೆಮೋರಿಯಲ್ ಚೆಸ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಅವರು ಈ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಆಗಿದ್ದಾರೆ.