ಬೆಂಗಳೂರು: ಮೈಸೂರಿನಲ್ಲಿ ಸೈಕ್ಲಿಂಗ್ ವೆಲೋಡ್ರೋಮ್, ಕಲಬುರಗಿಯಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ, ವಿರಾಜಪೇಟೆಯಲ್ಲಿ ಕ್ರೀಡಾ ತರಬೇತಿ ವಸತಿನಿಲಯ, ಬೆಳಗಾವಿಯಲ್ಲಿ ಕುಸ್ತಿ ಅಖಾಡ ಸೇರಿದಂತೆ ಯುವ ಸಬಲೀಕರಣ ಮತ್ತು ಕ್ರೀಡೆಗೆ ಹಲವು ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.

ಕಯಾಕಿಂಗ್ ಮತ್ತು ಕನೊಯಿಂಗ್ ಶ್ರೇಷ್ಠತಾ ಕೇಂದ್ರ ಸ್ಥಾಪನೆ, ರಾಜ್ಯದ ನಾಲ್ಕು ಕಡೆಗಳಲ್ಲಿ ರಾಷ್ಟ್ರಮಟ್ಟದ ಮ್ಯಾರಥಾನ್ ಆಯೋಜನೆ, ಕ್ರೀಡಾಂಗಣಗಳ ಅಭಿವೃದ್ಧಿಗಳ ಘೋಷಣೆಯೂ ಬಜೆಟ್ನಲ್ಲಿವೆ. ಪ್ರಮುಖ ಅಂಶಗಳು ಇಲ್ಲಿವೆ.

* ಬೆಂಗಳೂರಿನ ಹೆಸರಘಟ್ಟ ಕೆರೆಯಲ್ಲಿ ಪಿಪಿಪಿ ಮಾದರಿಯಲ್ಲಿ ಕಯಾಕಿಂಗ್ ಮತ್ತು ಕನೊಯಿಂಗ್ ಶ್ರೇಷ್ಠತಾ ಕೇಂದ್ರ ಸ್ಥಾಪನೆ

* ‘ಸಶಕ್ತ ಕರ್ನಾಟಕ’ ಕಾರ್ಯಕ್ರಮದಡಿ ತಲಾ ₹10 ಲಕ್ಷ ವೆಚ್ಚದಲ್ಲಿ ಬೆಳಗಾವಿ, ಗೋಕರ್ಣ, ಚಿತ್ರದುರ್ಗ, ಹಂಪಿಯಲ್ಲಿ ರಾಷ್ಟ್ರ ಮಟ್ಟದ ಮ್ಯಾರಥಾನ್ಗಳ ಆಯೋಜನೆ

* 10 ಜಿಲ್ಲಾ ಕೇಂದ್ರಗಳಲ್ಲಿ ತಲಾ ₹ 4 ಲಕ್ಷ ವೆಚ್ಚದಲ್ಲಿ ಪ್ರಸಿದ್ಧ ಕ್ರೀಡಾಪಟುಗಳ ಹೆಸರಿನಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್ಗಳ ಆಯೋಜನೆ

* ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು ಮೈಸೂರಿನಲ್ಲಿರುವ ದಟ್ಟಗಳ್ಳಿಯಲ್ಲಿ ಗುರುತಿಸಲಾದ ಜಾಗದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಾಣ

* ಬಂಗಾರಪೇಟೆ, ಮುದ್ದೇಬಿಹಾಳ, ಗುಳೇದಗುಡ್ಡ, ಕನಕಪುರ, ಕುಕನೂರು ಮತ್ತು ಮಸ್ಕಿಯಲ್ಲಿ ತಲಾ ₹2 ಕೋಟಿ ವೆಚ್ಚದಲ್ಲಿ ತಾಲ್ಲೂಕು ಕ್ರೀಡಾಂಗಣಗಳ ನಿರ್ಮಾಣ

* ಕಲ್ಯಾಣ ಕರ್ನಾಟಕ ಭಾಗದ ಕ್ರೀಡಾಪಟುಗಳಿಗೆ ಉತ್ತಮ ಕ್ರೀಡಾ ವಿಜ್ಞಾನ ಸೇವೆಗಳನ್ನು ಒದಗಿಸಲು ಕಲಬುರಗಿಯಲ್ಲಿ ಕೇಂದ್ರವನ್ನು ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಆಧುನಿಕ ಕ್ರೀಡಾ ವಿಜ್ಞಾನ ಆರಂಭ

* ತುಮಕೂರಿನಲ್ಲಿ ₹ 3 ಕೋಟಿ ವೆಚ್ಚದಲ್ಲಿ ಕ್ರೀಡಾ ಮೂಲಸೌಕರ್ಯಗಳ ಉನ್ನತೀಕರಣ

* ವಿಜಯನಗರ ಜಿಲ್ಲೆಯಲ್ಲಿರುವ ಕ್ರೀಡಾಂಗಣವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮತ್ತು ಕೆಎಂಇಆರ್ಸಿ ಅನುದಾನದಲ್ಲಿ ಮೇಲ್ದರ್ಜೆಗೇರಿಸಲಾಗುವುದು.

* ಕ್ರೀಡಾ ಪ್ರತಿಭೆಯನ್ನು ಪ್ರೋತ್ಸಾಹಿಸಲು ವಿರಾಜಪೇಟೆಯಲ್ಲಿ ಸುಸಜ್ಜಿತ ಕ್ರೀಡಾ ತರಬೇತಿ ವಸತಿ ನಿಲಯ ನಿರ್ಮಾಣ

* ಕುಸ್ತಿಪಟುಗಳನ್ನು ಪ್ರೋತ್ಸಾಹಿಸಲು ಬೆಳಗಾವಿಯ ಬೆಳಗುಂದಿಯಲ್ಲಿ ನೂತನ ಕುಸ್ತಿ ಅಖಾಡ ನಿರ್ಮಾಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.