ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶಸ್ತಿ ಸಂಭ್ರಮದಲ್ಲಿ ತೇಲಿದ ದೀಪಾ ಮಲಿಕ್

Last Updated 29 ಆಗಸ್ಟ್ 2019, 17:04 IST
ಅಕ್ಷರ ಗಾತ್ರ

ನವದೆಹಲಿ: ಪ್ಯಾರಾಲಿಂಪಿಕ್‌ನಲ್ಲಿ ಬೆಳ್ಳಿ ಪದಕ ಗೆದ್ದ ದೀಪಾ ಮಲಿಕ್ ಇಲ್ಲಿ ಗುರುವಾರ ನಡೆದ ಖೇಲ್‌ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಭ್ರಮದ ಅಲೆಯಲ್ಲಿ ತೇಲಿದರು. ಖೇಲ್ ರತ್ನ ಪ್ರಶಸ್ತಿ ಗಳಿಸಿದ ಮೊದಲ ಮಹಿಳಾ ಪ್ಯಾರಾ ಅಥ್ಲೀಟ್ ಮತ್ತು ಅತ್ಯಂತ ಹಿರಿಯ ಕ್ರೀಡಾಪಟು ಆಗಿದ್ದಾರೆ ಅವರು.

ಕ್ರೀಡಾ ದಿನಾಚರಣೆ ಅಂಗವಾಗಿ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ರೀಡಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ತರಬೇತಿ ಶಿಬಿರದಲ್ಲಿ ಇರುವುದರಿಂದ ಬಜರಂಗ್ ಪೂನಿಯಾ ಭಾಗವಹಿಸಿರಲಿಲ್ಲ.

2016ರ ರಿಯೊ ಪ್ಯಾರಾಲಿಂಪಿಕ್‌ನ ಎಫ್‌ 53 ವಿಭಾಗದ ಶಾಟ್‌ಪಟ್‌ನಲ್ಲಿ ದೀಪಾ ಮಲಿಕ್ಬೆಳ್ಳಿ ಗೆದ್ದಿದ್ದರು. ಬಜರಂಗ್ ಪೂನಿಯಾ ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್‌ ಕುಸ್ತಿಯಲ್ಲಿ ಚಾಂಪಿಯನ್‌ ಆಗಿದ್ದರು. ಕಜಕಸ್ತಾನದಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಷಿಪ್‌ಗೆ ತಯಾರಿ ನಡೆಸುತ್ತಿರುವ ಅವರು ಈಗ ರಷ್ಯಾದಲ್ಲಿದ್ದಾರೆ.

ಸಮಾರಂಭದಲ್ಲಿ ಅರ್ಜುನ, ದ್ರೋಣಾಚಾರ್ಯ ಮತ್ತು ಧ್ಯಾನ್ ಚಂದ್ ಪ್ರಶಸ್ತಿಗಳನ್ನೂ ಪ್ರದಾನ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT