ನವದೆಹಲಿ: ಭಾರತ ಕುಸ್ತಿ ಫೆಡರೇಶನ್ಗೆ (ಡಬ್ಲ್ಯುಎಫ್ಐ) 2023ರಲ್ಲಿ ನಡೆದ ಚುನಾವಣೆಯು ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ನಡೆಸಿಲ್ಲವೆಂದು ದೂರಿ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಅವರ ಪತಿ ಸತ್ಯವ್ರತ ಕಾದಿಯಾನ್ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ವಿಚಾರಣೆಗೆ ಹಾಜರಾಗುವಂತೆ ಪೀಠವು ಹಲವು ಬಾರಿ ಸೂಚಿಸಿದ್ದರೂ, ಅರ್ಜಿದಾರರು ಅದನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ, ವಿಚಾರಣೆಯನ್ನು ಮುಂದುವರಿಸಲು ಅರ್ಜಿದಾರರಿಗೆ ಆಸಕ್ತಿ ಇದ್ದಂತಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿ ಮಿನೀ ಪುಷ್ಕರಣ ಅವರಿದ್ದ ಪೀಠವು ಅರ್ಜಿಯನ್ನು ವಜಾಗೊಳಿಸಿದೆ.

ಬ್ರಿಜ್ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು 2023ರ ಡಿಸೆಂಬರ್ನಲ್ಲಿ ನಡೆದ ಚುನಾವಣೆಯಲ್ಲಿ ಡಬ್ಲ್ಯುಎಫ್ಐನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಬಜರಂಗ್, ವಿನೇಶ್ ಹಾಗೂ ಸಾಕ್ಷಿ ಅವರು ಬೆಂಬಲಿಸಿದ್ದ ಅನಿತಾ ಶಿಯೋರಣ್ ಪರಾಭವಗೊಂಡಿದ್ದರು. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಈ ಕುಸ್ತಿಪಟುಗಳು ಆರೋಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.