ಬೆಂಗಳೂರು: ಕರ್ನಾಟಕ ರಾಜ್ಯ ಡಾಡ್ಜ್‌ಬಾಲ್ ಸಂಸ್ಥೆ ವತಿಯಿಂದ ಎರಡನೇ ರಾಜ್ಯ ಮಟ್ಟದ ಪುರುಷರ ಮತ್ತು ಮಹಿಳೆಯರ ಸೀನಿಯರ್ ಡಾಡ್ಜ್‌ಬಾಲ್ ಚಾಂಪಿಯನ್‌ಷಿಪ್ ಅನ್ನು ಸೆ.3ರಂದು ಬೆಂಗಳೂರಿನ ಯಲಚೇನಹಳ್ಳಿ ಟ್ರಾನ್ಸ್‌ಸೆಂಡ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಆವರಣದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕದ ವಿವಿಧ ಜಿಲ್ಲಾ ತಂಡಗಳು ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಲಿವೆ. ಮಹಾರಾಷ್ಟ್ರದ ಎಲ್ಲೋರಾದಲ್ಲಿ ಅಕ್ಟೋಬರ್‌ನಲ್ಲಿ ನಡೆಯುವ ರಾಷ್ಟ್ರೀಯ ಚಾಂಪಿಯನ್‌ಷಿಪ್‌ಗೆ ರಾಜ್ಯ ತಂಡವನ್ನು ಇದೇ ಸಂದರ್ಭ ಆಯ್ಕೆ ಮಾಡಲಾಗುತ್ತದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ.ನರಸಿಂಹ ರೆಡ್ಡಿ ತಿಳಿಸಿದ್ದಾರೆ.