ನವದೆಹಲಿ: ನಿಷೇಧಿತ ಮದ್ದು ಸೇವನೆ ಪರೀಕ್ಷೆಯಲ್ಲಿ ಸಿಕ್ಕಿಬಿದ್ದ ನಾಲ್ವರು ಅಪ್ರಾಪ್ತ ವಯಸ್ಸಿನ ಕ್ರೀಡಾಪಟುಗಳನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.

ಇಬ್ಬರು ಟ್ರ್ಯಾಕ್ ಆ್ಯಂಡ್ ಫೀಲ್ಡ್ ಅಥ್ಲೀಟ್‌ಗಳು ಹಾಗೂ ತಲಾ ಒಬ್ಬ ವಾಲಿಬಾಲ್ ಆಟಗಾರ ಮತ್ತು ಬಾಕ್ಸರ್ ಅಮಾನತುಗೊಂಡವರು. ಆಂಧ್ರ ಪ್ರದೇಶದ ತಿರುಪತಿಯಲ್ಲಿ ಹೋದ ವರ್ಷ ನವಂಬರ್ ತಿಂಗಳಲ್ಲಿ ನಡೆದ ರಾಷ್ಟ್ರೀಯ ಅಂತರ ಜಿಲ್ಲಾ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಟ್ರ್ಯಾಕ್ ಆ್ಯಂಡ್ ಫೀಲ್ಡ್ ಅಥ್ಲೀಟ್‌ಗಳ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿತ್ತು.

ಬಾಕ್ಸರ್ ಹಾಗೂ ವಾಲಿಬಾಲ್ ಆಟಗಾರರ ರಕ್ತದ ಮಾದರಿಯನ್ನು ಹೋದ ವರ್ಷ ನವೆಂಬರ್‌ನಲ್ಲಿ ನಡೆದ 65ನೇ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಸಂಗ್ರಹಿಸಲಾಗಿತ್ತು.

ಹ್ಯಾಮರ್ ಥ್ರೊ ಏಷ್ಯನ್ ಜೂನಿಯರ್ ಚಾಂಪಿಯನ್ ಆಶಿಷ್ ಜಾಖಡ್ ಕೂಡ ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದು, ಅವರನ್ನೂ ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ. ಹೋದ ವರ್ಷದ ಸೆಪ್ಟೆಂಬರ್‌ನಲ್ಲಿ ಪುಣೆಯಲ್ಲಿ ನಡೆದಿದ್ದ ಸರ್ವೀಸಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಅವರ ಪರೀಕ್ಷಾ ಮಾದರಿ ಸಂಗ್ರಹಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.