ನವದೆಹಲಿ: ಖ್ಯಾತ ಜಾವೆಲಿನ್ ಪಟು ಹಾಗೂ ಡಬಲ್ ಒಲಿಂಪಿಕ್ಸ್ ಪದಕವಿಜೇತ ನೀರಜ್ ಚೋಪ್ರಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಆಪ್ತರು ಹಾಗೂ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ನೀರಜ್, ಹಿಮಾನಿ ಮೋರ್ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು ಮದುವೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ನೀರಜ್-ಹಿಮಾನಿ ಎಂಬ ಶೀರ್ಷಿಕೆ ನೀಡಿರುವ ಅವರು, ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿರುವುದಾಗಿ ಬರೆದುಕೊಂಡಿದ್ದಾರೆ.

'ನಾನು ನನ್ನ ಕುಟುಂಬದೊಂದಿಗೆ ನನ್ನ ಜೀವನದ ಹೊಸ ಅಧ್ಯಾಯವನ್ನು ಪ್ರಾರಂಭಿಸಿದೆ. ಈ ಕ್ಷಣದಲ್ಲಿ ಪ್ರತಿಯೊಬ್ಬರ ಆಶೀರ್ವಾದಕ್ಕೂ ನಾನು ಕೃತಜ್ಞನಾಗಿದ್ದೇನೆ. ಪ್ರೀತಿಯಿಂದ ಬಂಧಿತನಾಗಿದ್ದೇನೆ, ಸಂತೋಷದಿಂದ ಎಂದೆಂದಿಗೂ' ಎಂದು ನೀರಜ್ ಮದುವೆ ಸಮಾರಂಭದ ಚಿತ್ರಗಳೊಂದಿಗೆ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.

ನೀರಜ್ ಚೋಪ್ರಾ ಪತ್ನಿ ಹಿಮಾನಿ ಮೋರ್ ಅವರು ಹರಿಯಾಣದ ಸೋನಿಪತ್ ಮೂಲದವರಾಗಿದ್ದು ಟೆನಿಸ್ ಆಟಗಾರ್ತಿಯಾಗಿದ್ದಾರೆ. ಪ್ರಸ್ತುತ ಅವರು ಅಮೆರಿಕದ ನ್ಯೂ ಹ್ಯಾಂಪ್ಶೈರ್ನಲ್ಲಿರುವ ಫ್ರಾಂಕ್ಲಿನ್ ಪಿಯರ್ಸ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ.

2 ದಿನಗಳ ಹಿಂದೆಯೇ ಮದುವೆ ನಡೆದಿದೆ. ನವ ದಂಪತಿ ಹನಿಮೂನ್ಗೆ ತೆರಳಿದ್ದಾರೆ ಎಂದು ನೀರಜ್ ಚಿಕ್ಕಪ್ಪ ಭೀಮ್ ಪಿಟಿಐಗೆ ತಿಳಿಸಿದ್ದಾರೆ.

2 ಬಾರಿ ಒಲಿಂಪಿಕ್ಸ್ ಪದಕ ವಿಜೇತ

ಟೋಕಿಯೊ ಒಲಿಂಪಿಕ್ಸ್ನಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದಿದ್ದ ನೀರಜ್, ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಈ ಮೂಲಕ ಅಥ್ಲೆಟಿಕ್ಸ್ನಲ್ಲಿ ಸತತ 2 ಪದಕ ಗೆದ್ದ ಏಕೈಕ ಭಾರತೀಯ ಕ್ರೀಡಾಪಟು ಎನಿಸಿಕೊಂಡಿದ್ದಾರೆ.
.Paris Olympics | ಬೆಳ್ಳಿ ಗೆದ್ದು ಸಂಭ್ರಮಿಸಿದ ನೀರಜ್ ಚೋಪ್ರಾ.. .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.