ಬೆಂಗಳೂರು: ಸಾಂಘಿಕ ಆಟ ಪ್ರದರ್ಶಿಸಿದ ಬೆಂಗಳೂರು ಎಫ್‌ಸಿ ತಂಡವು ಸಿ. ಪುಟ್ಟಯ್ಯ ಸ್ಮಾರಕ ಕಪ್ ಫುಟ್‌ಬಾಲ್ ಟೂರ್ನಿಯ ಪಂದ್ಯದಲ್ಲಿ 5–1 ಗೋಲುಗಳಿಂದ ಬೆಂಗಳೂರು ಇಂಡಿಪೆಂಡೆಂಟ್ಸ್ ಎಫ್‌ಸಿ ತಂಡವನ್ನು ಸುಲಭವಾಗಿ ಮಣಿಸಿತು.
ಬೆಂಗಳೂರು ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಡಿ ಗುಂಪಿನ ಕೊನೆಯ ಪಂದ್ಯದಲ್ಲಿ ಬಿಎಫ್‌ಸಿ ತಂಡವು ಈ ಗೆಲುವಿನೊಂದಿಗೆ ಸೆಮಿಫೈನಲ್‌ಗೆ ಮುನ್ನಡೆಯಿತು.