ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ ರ‍್ಯಾಂಕಿಂಗ್ ಟಿಟಿ: ಗೌರವ್‌, ತನಿಷ್ಕಾಗೆ ಕಿರೀಟ

Published : 31 ಆಗಸ್ಟ್ 2024, 21:30 IST
Last Updated : 31 ಆಗಸ್ಟ್ 2024, 21:30 IST
ಫಾಲೋ ಮಾಡಿ
Comments

ಬೆಂಗಳೂರು: ಗೌರವ್ ಗೌಡ ಮತ್ತು ತನಿಷ್ಕಾ ಕಪಿಲ್ ಕಾಲಭೈರವ್ ಅವರು ರಾಜ್ಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಯ‌ ಬಾಲಕರ ಮತ್ತು ಬಾಲಕಿಯರ 15 ವರ್ಷದೊಳಗಿನವರ ಸಿಂಗಲ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.

ಶನಿವಾರ ಬೆಳಗಾವಿಯಲ್ಲಿ ನಡೆದ ಬಾಲಕರ ವಿಭಾಗದ ಫೈನಲ್‌ನಲ್ಲಿ ಗೌರವ್ 11-6, 6-11, 11-8, 11-2ರಲ್ಲಿ ರೇಯಾನ್ಶ್ ಜಲನ್‌ರನ್ನು ಸೋಲಿಸಿದರು.

ತನಿಷ್ಕಾ ಅವರು 13-11, 11-6, 11-5ರಲ್ಲಿ ಹಿಯಾ ಸಿಂಗ್ ಅವರನ್ನು ಸೋಲಿಸಿ ಪ್ರಶಸ್ತಿ ತಮ್ಮದಾಗಿಸಿಕೊಂಡರು.

ಇದಕ್ಕೂ ಮೊದಲು, ಸೆಮಿಫೈನಲ್‌ನಲ್ಲಿ ತನಿಷ್ಕಾ ಅವರು 11-7, 11-6, 11-6 ಅಂತರದಲ್ಲಿ ರಾಶಿ ವಿ. ರಾವ್ ವಿರುದ್ಧ ಗೆಲುವು ಸಾಧಿಸಿದರು.

ಬಾಲಕರ ವಿಭಾಗದ ಸೆಮಿಫೈನಲ್‌ನಲ್ಲಿ ಗೌರವ್ 11-6, 11-13, 11-6, 9-11, 11-7ರಿಂದ ಶುಭಂ ತ್ರಿವೇದಿ ಅವರನ್ನು ಮಣಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT