ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜರ್ಮನ್‌ ಓಪನ್‌: ಪ್ರಧಾನ ಸುತ್ತಿಗೆ ಶಂಕರ್‌

Published 27 ಫೆಬ್ರುವರಿ 2024, 23:30 IST
Last Updated 27 ಫೆಬ್ರುವರಿ 2024, 23:30 IST
ಅಕ್ಷರ ಗಾತ್ರ

ಮುಲ್ಹೈಮ್ ಆನ್ ಡೆರ್ ರುಹ್ರ್ (ಜರ್ಮನಿ) : ಭಾರತದ ಶಂಕರ್‌ ಮುತ್ತುಸ್ವಾಮಿ ಅವರು ಜರ್ಮನ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ ಟೂರ್ನಿಯ ಕ್ವಾಲಿಫೈಯರ್‌ ಪಂದ್ಯಗಳನ್ನು ಗೆದ್ದು, ಪ್ರಧಾನ ಸುತ್ತು ಪ್ರವೇಶಿಸಿದರು.

ಮಂಗಳವಾರ ನಡೆದ ಪುರುಷರ ಸಿಂಗಲ್ಸ್‌ ಸ್ಪರ್ಧೆಯ ಕ್ವಾಲಿಫೈಯರ್‌ನ ಮೊದಲ ಪಂದ್ಯದಲ್ಲಿ 20 ವರ್ಷದ ಶಂಕರ್‌ ಅವರು 21-17, 21-10 ರಿಂದ ಜರ್ಮನಿಯ ಕೈ ಸ್ಕೇಫರ್ ವಿರುದ್ಧ ಗೆಲುವು ಸಾಧಿಸಿದರು.

ನಂತರ ನಡೆದ ಎರಡನೇ ಪಂದ್ಯದಲ್ಲಿ ಅವರು 21-11 21-18 ರಿಂದ ಸ್ವಿಟ್ಜರ್ಲೆಂಡ್‌ನ ಟೋಬಿಯಾಸ್ ಕುಯೆಂಜಿ ವಿರುದ್ಧ ಮೇಲುಗೈ ಸಾಧಿಸಿದರು.

ಶಂಕರ್‌ ಅವರು ಪ್ರಧಾನ ಸುತ್ತಿನ ಮೊದಲ ‍ಪಂದ್ಯದಲ್ಲಿ ಐದನೇ ಶ್ರೇಯಾಂಕದ ಬ್ರಿಯಾನ್ ಯಾಂಗ್ (ಕೆನಡಾ) ಅವರನ್ನು ಎದುರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT