ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಯಾರಾ ಏಷ್ಯನ್‌ ಕ್ರೀಡಾಕೂಟದ ಪದಕ ವಿಜೇತರಿಗೆ ಅಭಿನಂದನೆ

Published 1 ನವೆಂಬರ್ 2023, 16:22 IST
Last Updated 1 ನವೆಂಬರ್ 2023, 16:22 IST
ಅಕ್ಷರ ಗಾತ್ರ

ನವದೆಹಲಿ: ‘ಭಾರತದ ಪ್ಯಾರಾ ಅಥ್ಲೀಟ್‌ಗಳು ಚೀನಾದಿಂದ ಸ್ವದೇಶಕ್ಕೆ ಗೆದ್ದು ತಂದ 111 ಪದಕಗಳು ಕೇವಲ ಪದಕಗಳಲ್ಲ. ಅದು ದೇಶದ 140 ಕೋಟಿ ಜನರು ಕಂಡ ಕನಸುಗಳ ಫಲ’ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

‌ಹಾಂಗ್‌ಝೌನ ಪ್ಯಾರಾ ಏಷ್ಯನ್‌ ಕ್ರೀಡಾಕೂಟದಲ್ಲಿ ಪದಕಗಳನ್ನು ಗೆದ್ದ ಭಾರತದ ಆಟಗಾರರನ್ನು ಅವರು ಬುಧವಾರ ಅಭಿನಂದಿಸಿ ಮಾತನಾಡಿದರು.

‘ಕ್ರೀಡಾಪಟುಗಳಿಗೆ ಅತ್ಯುತ್ತಮ ಸೌಲಭ್ಯಗಳನ್ನು ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಅವರಿಗೆ ಎದುರಾಗುವ ಅಡೆತಡೆಗಳನ್ನು ನಿವಾರಿಸಿ, ಕ್ರೀಡಾಕ್ಷೇತ್ರದಲ್ಲಿ ಬದಲಾವಣೆಯ ಗಾಳಿಯನ್ನು ಕಾಣುತ್ತಿದ್ದೇವೆ’ ಎಂದು ಹೇಳಿದರು.

‘ಕಳೆದ 9 ವರ್ಷಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಭಾರತದಲ್ಲಿ ಉತ್ತಮ ಕ್ರೀಡಾಪಟುಗಳನ್ನು ತಯಾರಿಸುವ ಕೆಲಸ ನಡೆಯುತ್ತಿದೆ. ಒಬ್ಬ ಕ್ರೀಡಾಪಟುವಿಗೆ ₹ 4ರಿಂದ 5 ಕೋಟಿ ಸರ್ಕಾರ ಖರ್ಚು ಮಾಡುತ್ತಿದೆ’ ಎಂದರು.

‘ಕ್ರೀಡಾಪಟುಗಳಿಗೆ ಸೂಕ್ತ ವೇದಿಕೆ ಸಿಕ್ಕಾಗ ಮಾತ್ರ ಅವರ ಸಾಮರ್ಥ್ಯ ಬೆಳಕಿಗೆ ಬರಲು ಸಾಧ್ಯ. ಖೇಲೋ ಇಂಡಿಯಾ ಮತ್ತು ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಯೋಜನೆಗಳು ಕ್ರೀಡಾಪಟುಗಳ ಕಾರ್ಯಕ್ಷಮತೆಯನ್ನು ಗುರುತಿಸಲು ಉತ್ತಮ ವೇದಿಕೆಯಾಗಿದೆ’ ಎಂದು ತಿಳಿಸಿದರು.

‘2014ರ ಏಷ್ಯನ್‌ ಕ್ರೀಡಾಕೂಟದಲ್ಲಿ ಭಾರತ ಗೆದ್ದ ಪದಕಕ್ಕಿಂತ ಈ ಬಾರಿ ಮೂರು ಪಟ್ಟು ಹೆಚ್ಚು ಪದಕಗಳನ್ನು ಗೆದ್ದಿದ್ದೇವೆ. ಅಲ್ಲದೆ, ಚಿನ್ನದ ಸಾಧನೆಯಲ್ಲಿ 10 ಪಟ್ಟು ಹೆಚ್ಚಾಗಿದೆ. ಅಂದು 15ನೇ ಸ್ಥಾನದಲ್ಲಿದ್ದ ಭಾರತ, ಇಂದು ಅಗ್ರ ಐದರಲ್ಲಿ ನಾವಿದ್ದೇವೆ’ ಎಂದು ಹೇಳಿದರು.

2030 ಯೂತ್ ಒಲಂಪಿಕ್ ಗೇಮ್ಸ್ ಮತ್ತು 2036ರ ಬೇಸಿಗೆ ಒಲಿಂಪಿಕ್ಸ್‌ನ ಆತಿಥ್ಯ ವಹಿಸಲು ಭಾರತ ಉತ್ಸುಕವಾಗಿದೆ ಎಂದು ಅವರು ಪುನರುಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT