ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಿಬಾ ಕೇಂದ್ರಿಯ ಮಂಡಳಿಗೆ ಗೋವಿಂದರಾಜ್ ಸೇರ್ಪಡೆ

Published 23 ಆಗಸ್ಟ್ 2023, 16:12 IST
Last Updated 23 ಆಗಸ್ಟ್ 2023, 16:12 IST
ಅಕ್ಷರ ಗಾತ್ರ

ಬೆಂಗಳೂರು: ಅಂತರರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್‌ ಫೆಡರೇಷನ್‌ನ (ಫಿಬಾ) ಕೇಂದ್ರ ಮಂಡಳಿಗೆ  ಕೆ. ಗೋವಿಂದರಾಜ್‌ ಅವರನ್ನು ಸದಸ್ಯರನ್ನಾಗಿ ಸೇರ್ಪಡೆ ಮಾಡಲಾಗಿದೆ.

2023–27ರ ಅವಧಿಗೆ ಅವರು ಈ ಸ್ಥಾನ ಪಡೆದಿದ್ದಾರೆ. ಈ ಹುದ್ದೆಗೆ ನೇಮಕಗೊಂಡ ಮೊದಲ ಭಾರತೀಯ ಎಂಬ ಹಿರಿಮೆಗೆ ಅವರು ಪಾತ್ರವಾಗಿದ್ದಾರೆ. ಅವರು ಈಚೆಗೆ ಫಿಬಾ ಏಷ್ಯಾ ಅಧ್ಯಕ್ಷರಾಗಿ ಈಚೆಗೆ ಚುನಾಯಿತರಾಗಿದ್ದರು.

‘ಫಿಬಾ ಕೇಂದ್ರ ಮಂಡಳಿಯ ಭಾಗವಾಗಿರುವುದು ನನಗೆ ಸಿಕ್ಕ ದೊಡ್ಡ ಗೌರವವಾಗಿದೆ. ಏಷ್ಯಾದಲ್ಲಿ ಬ್ಯಾಸ್ಕೆಟ್‌ಬಾಲ್ ಕ್ರೀಡೆಯನ್ನು ಬೆಳೆಸುವ ಜವಾಬ್ದಾರಿ ನನ್ನ ಮೇಲಿದೆ’ ಎಂದು ಭಾರತ ಬ್ಯಾಸ್ಕೆಟ್‌ಬಾಲ್ ಫೆಡರೇಶನ್‌ನ ಮಾಜಿ ಅಧ್ಯಕ್ಷರೂ ಆಗಿರುವ ಗೋವಿಂದರಾಜ್ ಪ್ರತಿಕ್ರಿಯಿಸಿದ್ದಾರೆ.

ಗೋವಿಂದರಾಜ್ ಅವರು ಫಿಬಾ ​​ನೂತನ ಅಧ್ಯಕ್ಷ ಶೇಖ್ ಸೌದ್ ಬಿನ್ ಅಲಿ ಅಲ್ತಾನಿ, ಪ್ರಧಾನ ಕಾರ್ಯದರ್ಶಿ ಆ್ಯಂಡ್ರಿಯಾಸ್ ಜಾಗ್ಲಿಸ್, ಏಷ್ಯಾದ ಕಾರ್ಯನಿರ್ವಾಹಕ ನಿರ್ದೇಶಕ ಹಾಗೋಪ್ ಖಾಜಿರಿಯನ್ ಮತ್ತು ಇತರ ಅಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಭಾಗವಹಿಸಿದರು. ವಿಶ್ವದಲ್ಲಿ ಬ್ಯಾಸ್ಕೆಟ್‌ಬಾಲ್ ಕ್ರೀಡೆಯ ಬೆಳವಣಿಗೆಯ ಕುರಿತು  ಈ ಸಭೆಯಲ್ಲಿ ಚರ್ಚಿಸಲಾಯಿತು.

ಗೋವಿಂದರಾಜ್ ಅವರು ಕರ್ನಾಟಕ ರಾಜ್ಯ ಬ್ಯಾಸ್ಕೆಟ್‌ಬಾಲ್ ಸಂಸ್ಥೆ ಕಾರ್ಯದರ್ಶಿಯಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿಯೂ ಅವರು ಈಚೆಗೆ ನೇಮಕವಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT