ನವದೆಹಲಿ: ‘ಕಬಡ್ಡಿಯನ್ನು ಒಲಿಂಪಿಕ್ ಕ್ರೀಡಾಕೂಟದಲ್ಲಿ ಸೇರಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ನಡೆಸಲಾಗುವುದು’ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಗುರುವಾರ ಭರವಸೆ ನೀಡಿದ್ದಾರೆ.

‘ಖೇಲೊ ಇಂಡಿಯಾ ಕ್ರೀಡಾಕೂಟದಲ್ಲಿ ಉತ್ತಮ ಸಾಮರ್ಥ್ಯ ತೋರಿದ 2,880 ಕ್ರೀಡಾಪಟುಗಳನ್ನು ಉನ್ನತ ಮಟ್ಟದ ತರಬೇತಿಗಾಗಿ ಆಯ್ಕೆ ಮಾಡಲಾಗಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಅವರು ಸಾಧನೆ ಮಾಡುವ ನಿರೀಕ್ಷೆ ಇದೆ’ ಎಂದು ಸಚಿವರು ಲೋಕಸಭೆಯಲ್ಲಿ ತಿಳಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ‘ವಿವಿಧ ಯೋಜನೆಗಳಲ್ಲಿ ಆಯ್ಕೆಯಾದ ಕ್ರೀಡಾಪಟುಗಳಿಗೆ ಆಧುನಿಕ ಸೌಲಭ್ಯ ಒಳಗೊಂಡ ತರಬೇತಿ ನೀಡಲಾಗುವುದು’ ಎಂದರು.

‘ರಾಜ್ಯಗಳು ಕೂಡ ಉತ್ತಮ ಕ್ರೀಡಾಪಟುಗಳನ್ನು ಗುರುತಿಸಲು ಮತ್ತು ಬೆಳೆಸಲು ಮುಂದಾಗಬೇಕು’ ಎಂದು ರಿಜಿಜು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.