ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ಅಥ್ಲೀಟ್‌ ಹಕಂ ಸಿಂಗ್‌ ನಿಧನ

Last Updated 14 ಆಗಸ್ಟ್ 2018, 13:42 IST
ಅಕ್ಷರ ಗಾತ್ರ

ಚಂಡೀಗಡ: ಏಷ್ಯನ್‌ ಕ್ರೀಡಾಕೂಟದಲ್ಲಿ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದಿದ್ದ ಭಾರತದ ಅಥ್ಲೀಟ್‌ ಹಕಂ ಸಿಂಗ್‌ (64) ಮಂಗಳವಾರ ನಿಧನರಾದರು.

ಮೂತ್ರಪಿಂಡ ಮತ್ತು ಯಕೃತ್‌ ಕಾಯಿಲೆಯಿಂದ ಬಳಲುತ್ತಿದ್ದ ಹಕಂ, ಸಂಗ್ರೂರ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಪಂಜಾಬ್‌ನ ಬರ್ನಾಲಾ ಜಿಲ್ಲೆಯ ಭಟ್ಟಾಲ್‌ ಗ್ರಾಮದಲ್ಲಿ ಜನಿಸಿದ್ದ ಹಕಂ, ಭಾರತೀಯ ಸೇನೆಯಲ್ಲಿ ಹವಾಲ್ದಾರ್‌ ಆಗಿ ಕೆಲಸ ಮಾಡಿದ್ದರು. 1978ರಲ್ಲಿ ಬ್ಯಾಂಕಾಕ್‌ನಲ್ಲಿ ನಡೆದಿದ್ದ ಏಷ್ಯನ್‌ ಕೂಟದ 20 ಕಿಲೊ ಮೀಟರ್ಸ್‌ ನಡಿಗೆ ಸ್ಪರ್ಧೆಯಲ್ಲಿ ಕೂಟ ದಾಖಲೆ ನಿರ್ಮಿಸಿದ್ದರು. ಅವರು 1 ಗಂಟೆ 31ನಿಮಿಷ 54.4 ಸೆಕೆಂಡುಗಳಲ್ಲಿ ನಿಗದಿತ ದೂರ ಕ್ರಮಿಸಿದ್ದರು.

1979ರಲ್ಲಿ ಟೋಕಿಯೊದಲ್ಲಿ ಆಯೋಜನೆ ಯಾಗಿದ್ದ ಏಷ್ಯನ್‌ ಟ್ರ್ಯಾಕ್‌ ಮತ್ತು ಫೀಲ್ಡ್‌ ಚಾಂಪಿಯನ್‌ಷಿಪ್‌ನಲ್ಲೂ ಹಕಂ ಅವರು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು.

1987ರಲ್ಲಿ ಸೇನೆಯಿಂದ ನಿವೃತ್ತರಾಗಿದ್ದ ಅವರು 2003ರಲ್ಲಿ ಪಂಜಾಬ್‌ ಪೊಲೀಸ್‌ ತಂಡದ ಅಥ್ಲೆಟಿಕ್ಸ್‌ ಕೋಚ್‌ ಆಗಿ ನೇಮಕಗೊಂಡಿದ್ದರು. ಹಕಂ ಅವರಿಗೆ 2008ರಲ್ಲಿ ದ್ರೋಣಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

‘ನಮ್ಮ ತಂದೆ ಮಂಗಳವಾರ ಬೆಳಿಗ್ಗೆ 7.30ಕ್ಕೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆ ದರು. ಹುಟ್ಟೂರು ಭಟ್ಟಾಲ್‌ನಲ್ಲಿ ಅವರ ಅಂತ್ಯಕ್ರಿಯೆ ನಡೆಸುತ್ತೇವೆ’ ಎಂದು ಹಕಂ ಅವರ ಮಗ ಸುಖಜೀತ್‌ ಸಿಂಗ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT