ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಷ್ಯನ್‌ ಗೇಮ್ಸ್‌: ಅಭ್ಯಾಸ ಆರಂಭಿಸಿದ ಹೀನಾ

ದಿನಕ್ಕೆ 8ರಿಂದ 9 ಗಂಟೆಗಳ ಕಾಲ ತರಬೇತಿ
Last Updated 20 ಜುಲೈ 2018, 19:15 IST
ಅಕ್ಷರ ಗಾತ್ರ

ಭೋಪಾಲ್‌ (ಪಿಟಿಐ): ಮುಂದಿನ ತಿಂಗಳು ನಡೆಯುವ ಏಷ್ಯನ್‌ ಕ್ರೀಡಾಕೂಟಕ್ಕಾಗಿ ಭಾರತದ ಶೂಟರ್‌ ಹೀನಾ ಸಿಧು ಅವರು ಇಲ್ಲಿನ ಶೂಟಿಂಗ್‌ ಅಕಾಡೆಮಿಯಲ್ಲಿ ಅಭ್ಯಾಸ ಆರಂಭಿಸಿದ್ದಾರೆ.

ಇತ್ತೀಚೆಗೆ ಗೋಲ್ಡ್‌ ಕೋಸ್ಟ್‌ನಲ್ಲಿ ನಡೆದಿದ್ದ ಕಾಮನ್‌ವೆಲ್ತ್‌ ಕ್ರೀಡಾಕೂಟದ ಎರಡು ಶೂಟಿಂಗ್‌ ವಿಭಾಗಗಳಲ್ಲಿ ಹೀನಾ ಸಿಧು ಅವರು ಚಿನ್ನದ ಸಾಧನೆ ಮಾಡಿದ್ದರು.

ಹೀನಾ, ಏಷ್ಯನ್‌ ಗೇಮ್ಸ್‌ನ ಮಹಿಳೆಯರ ಶೂಟಿಂಗ್‌ ಸ್ಪರ್ಧೆಯಲ್ಲಿ ಪದಕ ಗೆಲ್ಲುವ ನೆಚ್ಚಿನ ಆಟಗಾರ್ತಿಯಾಗಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ 10 ಮೀಟರ್‌ ಹಾಗೂ 25 ಮೀಟರ್‌ ಏರ್‌ ಪಿಸ್ತೂಲ್‌ಗಳಲ್ಲಿ ಅಮೋಘ ಸಾಧನೆ ಮಾಡಿರುವ ಹೀನಾ, ದಿನಕ್ಕೆ 8ರಿಂದ 9 ಗಂಟೆಗಳ ಕಾಲ ಅಭ್ಯಾಸ ನಡೆಸುತ್ತಿದ್ದಾರೆ.

‘ಶೂಟಿಂಗ್‌ನ ತಂತ್ರಗಾರಿಕೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕಲಿಯುತ್ತಿದ್ದೇನೆ. ಏಷ್ಯನ್‌ ಗೇಮ್ಸ್‌ನಲ್ಲಿ ತೀವ್ರ ಪೈಪೋಟಿ ಇರುತ್ತದೆ. ಆದ್ದರಿಂದ, ಒತ್ತಡದ ವೇಳೆಯಲ್ಲೂ ಸಮರ್ಥವಾಗಿ ಆಡುವ ತಂತ್ರಗಾರಿಕೆಯನ್ನು ಕರಗತ ಮಾಡಿಕೊಳ್ಳುವುದು ಅಗತ್ಯ’ ಎಂದು ಹೀನಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT