ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Asian Games | ಭಾರತದ ಐತಿಹಾಸಿಕ ಸಾಧನೆ: ಪ್ರಧಾನಿ ಮೋದಿ ಅಭಿನಂದನೆ

Published : 8 ಅಕ್ಟೋಬರ್ 2023, 5:49 IST
Last Updated : 8 ಅಕ್ಟೋಬರ್ 2023, 5:49 IST
ಫಾಲೋ ಮಾಡಿ
Comments

ನವದೆಹಲಿ: ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲೇ ಅತಿ ಹೆಚ್ಚು ಪದಕಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಕ್ರೀಡಾಪಟುಗಳ ಕಠಿಣ ಪರಿಶ್ರಮ ಮತ್ತು ಅಚಲ ನಿರ್ಧಾರ ಇಡೀ ದೇಶವೇ ಹೆಮ್ಮೆಪಟ್ಟುಕೊಳ್ಳುವಂತೆ ಮಾಡಿದೆ ಎಂದು ಹೇಳಿದ್ದಾರೆ.

ನಮ್ಮ ಕ್ರೀಡಾಪಟುಗಳು 107 ಪದಕಗಳನ್ನು ಗೆದ್ದಿದ್ದಾರೆ. ಕಳೆದ 60 ವರ್ಷಗಳಲ್ಲೇ ಭಾರತದ ಶ್ರೇಷ್ಠ ಪ್ರದರ್ಶನ ಇದಾಗಿದೆ. ನಮ್ಮ ಕ್ರೀಡಾಪುಟಗಳ ಗೆಲುವು ಸದಾ ನೆನಪಿನಲ್ಲಿಡುವ ಕ್ಷಣಗಳನ್ನು ನೀಡಿದ್ದು, ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದ್ದಾರೆ.

ಚೀನಾದಲ್ಲಿ ಅಂತ್ಯಗೊಂಡ 19ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಒಟ್ಟು 107 ಪದಕಗಳನ್ನು ಗೆದ್ದಿದೆ. ಇದರಲ್ಲಿ 28 ಚಿನ್ನ, 38 ಬೆಳ್ಳಿ ಹಾಗೂ 41 ಕಂಚಿನ ಪದಕಗಳು ಸೇರಿವೆ. ನಾಲ್ಕು ವರ್ಷಗಳ ಹಿಂದೆ ಜಕಾರ್ತದಲ್ಲಿ ಭಾರತ 70 ಪದಕಗಳನ್ನು ಜಯಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT