ನಾಪೋಕ್ಲು(ಕೊಡಗು ಜಿಲ್ಲೆ): ನೆರವಂಡ, ಕುಪ್ಪಂಡ (ಕೈಕೇರಿ), ನೆಲ್ಲಮಕ್ಕಡ, ಪುದಿಯೋಕ್ಕಡ ತಂಡಗಳು, ಕುಂಡ್ಯೋಳಂಡ ಕಪ್ ಹಾಕಿ ಟೂರ್ನಿಯ ಪ್ರೀ ಕ್ವಾರ್ಟರ್ ಫೈನಲ್ ಪಂದ್ಯಗಳಲ್ಲಿ ಜಯ ಸಾಧಿಸಿ, ಎಂಟರ ಘಟ್ಟಕ್ಕೆ ಲಗ್ಗೆ ಇಟ್ಟವು.

ಇಲ್ಲಿನ ಚೆರಿಯಪರಂಬುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮುಕ್ಕಾಟಿರ (ಬೋಂದ) ಮತ್ತು ನೆರವಂಡ ತಂಡಗಳು ಸಮಬಲ ಸಾಧಿಸಿದ್ದವು. ನಂತರ ನಡೆದ ಪೆನಾಲ್ಟಿ ಶೂಟೌಟ್ನಲ್ಲಿ ನೆರವಂಡ 4–1ರಿಂದ ಮುಕ್ಕಾಟಿರ ತಂಡವನ್ನು ಮಣಿಸಿತು.

ಮತ್ತೊಂದು ಪಂದ್ಯದಲ್ಲಿ ಕುಪ್ಪಂಡ (ಕೈಕೇರಿ) ಮತ್ತು ಕಲಿಯಂಡ ತಂಡಗಳ ನಡುವೆಯೂ ಸಮಬಲದ ಹೋರಾಟ ನಡೆಯಿತು. ಕುಪ್ಪಂಡ ಸೋಮಯ್ಯ ಮೊದಲ ನಿಮಿಷದಲ್ಲಿ ಒಂದು ಗೋಲು ಹೊಡೆದರೆ ಕಲಿಯಂಡ ಭರತ್ 18 ನೇ ನಿಮಿಷದಲ್ಲಿ ಗೋಲು ಹೊಡೆದರು. ಬಳಿಕ, ಪೆನಾಲ್ಟಿ ಶೂಟ್ಔಟ್ನಲ್ಲಿ ಕುಪ್ಪಂಡ (ಕೈಕೇರಿ) ಕಲಿಯಂಡ ವಿರುದ್ದ 4-2 ರ ಅಂತರದಿಂದ ಜಯ ಸಾಧಿಸಿತು.

ಉಳಿದಂತೆ ನೆಲ್ಲಮಕ್ಕಡ ತಂಡವು ಅಂಜಪರವಂಡ ತಂಡದ ವಿರುದ್ಧ 4-0 ಅಂತರದಿಂದ; ಪುದಿಯೋಕ್ಕಡ ತಂಡವು ಕೂತಂಡ ತಂಡದ ವಿರುದ್ಧ 3-1 ಅಂತರದಿಂದ ಜಯ ಸಾಧಿಸಿದವು. ಇಂದೂ 4 ಪ್ರೀ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.