ನವದೆಹಲಿ: ಭಾರತ ಹಾಕಿ ತಂಡದ ನಾಯಕ ಮನ್‌ಪ್ರೀತ್ ಸಿಂಗ್ ಮತ್ತು ನಾಲ್ವರು ಆಟಗಾರರಿಗೆ ಕೋವಿಡ್ –19 ಸೋಂಕಿನ ಸೌಮ್ಯ ಲಕ್ಷಣಗಳಿವೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರದ (ಸಾಯ್) ವೈದ್ಯರು ತಿಳಿಸಿದ್ದಾರೆ.

ಬೆಂಗಳೂರಿನ ಸಾಯ್‌ನಲ್ಲಿರುವಹಾಕಿ ತಂಡದ ನಾಯಕ ಮನ್‌ಪ್ರೀತ್, ಡಿಫೆಂಡರ್ ಸುರೇಂದರ್ ಕುಮಾರ್, ಜಸ್ಕರಣ್ ಸಿಂಗ್, ಡ್ರ್ಯಾಗ್ ಫ್ಲಿಕರ್ ವರುಣ ಕುಮಾರ್ ಮತ್ತು ಗೋಲ್‌ಕೀಪರ್ ಕೃಷ್ಣಬಹಾದ್ದೂರ್ ಪಾಠಕ್ ಅವರಿಗೆ ಕೊರನಾ ಸೋಂಕು ಇರುವುದು ಈಚೆಗೆ ದೃಢಪಟ್ಟಿತ್ತು. ಅವರಿಗೆ ಸಾಯ್‌ನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರನ್ನೂ ಪ್ರತ್ಯೇಕವಾಸಕ್ಕೆ ಒಳಪಡಿಸಲಾಗಿದೆ.

’ಆಟಗಾರರಿಗೆ ಉತ್ತಮ ಚಿಕಿತ್ಸಾ ವ್ಯವಸ್ಥೆ ಮಾಡಲಾಗಿದೆ. ಅವರ ದೇಹದ ಉಷ್ಣತೆ, ಆಮ್ಲಜನಕದ ಪ್ರಮಾಣವು ಉತ್ತಮವಾಗಿರುವಂತೆ ನಿರ್ವಹಿಸಲಾಗುತ್ತಿದೆ. ಅವರಿಗೆ ಸೌಮ್ಯವಾದ ಲಕ್ಷಣಗಳಿವೆ‘ ಎಂದು ರಾಜ್ಯ ಸರ್ಕಾರನೇಮಿಸಿರುವ ವೈದ್ಯ ಡಾ. ಎಚ್.ಆರ್. ಅವಿನಾಶ್ ತಿಳಿಸಿದ್ದಾರೆ. ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

’ಒಬ್ಬರಿಗೆ ಮಾತ್ರ ಸ್ವಲ್ಪ ಜ್ವರ ಇದೆ. ಉಳಿದ ನಾಲ್ವರಿಗೆ ಇಲ್ಲ. ರೋಗನಿರೋಧಕ ಸಾಮರ್ಥ್ಯ ವೃದ್ಧಿಯ ಚಿಕಿತ್ಸೆ ಮತ್ತು ಕೆಲವು ಔಷಧಿಗಳನ್ನು ನೀಡುತ್ತಿದ್ದೇವೆ‘ ಎಂದು ಅವಿನಾಶ್ ಹೇಳಿದ್ದಾರೆ.

’ನಾನು ಐವರು ಆಟಗಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರೆಲ್ಲರ ಆರೋಗ್ಯ ಸ್ಥಿರವಾಗಿದೆ. ಸಾಯ್‌ನಲ್ಲಿ ಉತ್ತಮ ವ್ಯವಸ್ಥೆಗಳನ್ನು ಮಾಡಿದೆ. ಒಳ್ಳೆಯ ಚಿಕಿತ್ಸೆ ಸಿಗುತ್ತಿದೆ. ಆಟಗಾರರಿಗೆ ಸಾಯ್ ಕೇಂದ್ರದ ಅಡುಗೆಮನೆಯಿಂದಲೇ ವಿಶೇಷ ಖಾದ್ಯಗಳನ್ನು ಸಿದ್ಧಪಡಿಸಿ ಕೊಡಲಾಗುತ್ತಿದೆ‘ ಎಂದು ತಂಡದ ಮುಖ್ಯ ಕೋಚ್ ಗ್ರಹಾಂ ರೀಡ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.