ನವದೆಹಲಿ: ಕೊರೊನಾ ಸಂಕಷ್ಟ ಎದುರಿಸುವುದಕ್ಕಾಗಿ ಸ್ಥಾಪಿಸಿರುವ ಪಿಎಂ ಕೇರ್ಸ್ ನಿಧಿಗೆ ಹಾಕಿ ಇಂಡಿಯಾ ₹ 25 ಲಕ್ಷ ದೇಣಿಗೆ ನೀಡಲು ಮುಂದಾಗಿದೆ. ಸಂಸ್ಥೆಯ ಕಾರ್ಯಕಾರಿ ಮಂಡಳಿಬುಧವಾರ ಈ ನಿರ್ಧಾರ ಕೈಗೊಂಡಿದೆ.

‘ದೇಶ ಒಟ್ಟಾಗಿಪರಿಸ್ಥಿತಿಯನ್ನು ಎದುರಿಸಬೇಕಾದ ಕಾಲ ಬಂದಿದೆ. ಹಾಕಿಗೆ ಜನರು ಅಪಾರ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರ ಪ್ರೀತಿಗೆ ಸಣ್ಣ ಮಟ್ಟದಲ್ಲಾದರೂ ಸ್ಪಂದಿಸಬೇಕಾದ ಜವಾಬ್ದಾರಿ ನಮ್ಮ ಮೇಲೆ ಇದೆ. ಆದ್ದರಿಂದ ದೇಣಿಗೆ ನೀಡಲು ಅವಿರೋಧ ನಿರ್ಣಯವನ್ನು ಕೈಗೊಳ್ಳಲಾಗಿದೆ’ ಎಂದು ಹಾಕಿ ಇಂಡಿಯಾ ಅಧ್ಯಕ್ಷ ಮೊಹಮ್ಮದ್ ಮುಷ್ತಾಕ್ ಅಹಮ್ಮದ್ ಹೇಳಿದ್ದಾರೆ.

‘ಕಠಿಣ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಕೈಲಾದಷ್ಟು ಪ್ರಯತ್ನಿಸುತ್ತಿದೆ. ಜನರು ಇದಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು. ಲಾಕ್‌ಡೌನ್ ಅವಧಿಯಲ್ಲಿ ಅನವಶ್ಯಕವಾಗಿ ಮನೆಯಿಂದ ಹೊರಬರಬೇಡಿ. ಮನೆಯೊಳಗೆಯೇ ಸುರಕ್ಷಿತವಾಗಿ ಇರಿ’ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರಾಜಿಂದರ್ ಸಿಂಗ್ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.