ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಕಿ ಇಂಡಿಯಾದಿಂದ ಮಾಸ್ಟರ್ಸ್ ಕಪ್‌

Published 2 ಜುಲೈ 2024, 20:28 IST
Last Updated 2 ಜುಲೈ 2024, 20:28 IST
ಅಕ್ಷರ ಗಾತ್ರ

ನವದೆಹಲಿ: ಮೊದಲ ಬಾರಿ ಮಾಸ್ಟರ್ಸ್ ಕಪ್ ಟೂರ್ನಿಯನ್ನು ನಡೆಸುವುದಾಗಿ ಹಾಕಿ ಇಂಡಿಯಾ ಮಂಗಳವಾರ ಘೋಷಿಸಿದೆ. ಪುರುಷರ ಮತ್ತು ಮಹಿಳಾ ವಿಭಾಗಗಳಲ್ಲಿ ನಡೆಯುವ ಈ ಟೂರ್ನಿಯಲ್ಲಿ ಅನುಭವಿ ಆಟಗಾರರು ಭಾಗವಹಿಸಲಿದ್ದಾರೆ.

ಹಿರಿಯ ಆಟಗಾರರ ಕೌಶಲ ಮತ್ತು ಉತ್ಸಾಹವನ್ನು ಗಮನದಲ್ಲಿಟ್ಟುಕೊಂಡು ಈ ಟೂರ್ನಿ ಹಮ್ಮಿಕೊಳ್ಳಲಾಗಿದೆ.

ಎಲ್ಲಾ ಹಾಕಿ ಇಂಡಿಯಾ ಸಂಯೋಜಿತ ರಾಜ್ಯ ಘಟಕಗಳು ಈ ಟೂರ್ನಿಯಲ್ಲಿ ಭಾಗವಹಿಸಲು ಅರ್ಹವಾಗಿವೆ. ಪಂದ್ಯಾವಳಿಯ ದಿನಾಂಕಗಳು ಮತ್ತು ಸ್ಥಳಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹಾಕಿ ಇಂಡಿಯಾ ಅಧ್ಯಕ್ಷ ದಿಲೀಪ್‌ ಟಿರ್ಕಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT