ಅಡಿಲೇಡ್ (ಪಿಟಿಐ): ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಣ ಮೂರು ಪಂದ್ಯಗಳ ಹಾಕಿ ಸರಣಿಯ ಅಂತಿಮ ಹಣಾಹಣಿ 1–1 ಗೋಲುಗಳ ಡ್ರಾದಲ್ಲಿ ಕೊನೆಗೊಂಡಿತು.

ಭಾನುವಾರ ನಡೆದ ಪಂದ್ಯದ 25ನೇ ನಿಮಿಷದಲ್ಲಿ ಮ್ಯಾಡಿಸನ್ ಬ್ರೂಕ್ಸ್ ಅವರು ಆಸ್ಟ್ರೇಲಿಯಾ ತಂಡಕ್ಕೆ ಮುನ್ನಡೆ ತಂದಿತ್ತರು. ಮರುಹೋರಾಟ ನಡೆಸಿದ ಭಾರತ ತಂಡಕ್ಕೆ ದೀಪ್ ಗ್ರೇಸ್ ಎಕ್ಕಾ 42ನೇ ನಿಮಿಷದಲ್ಲಿ ಸಮಬಲದ ಗೋಲು ಗಳಿಸಿದರು. ಪೆನಾಲ್ಟಿ ಕಾರ್ನರ್ ಅವಕಾಶವನ್ನು ಅವರು ಗೋಲಾಗಿ ಪರಿವರ್ತಿಸಿದರು.

ಮೊದಲ ಎರಡು ಪಂದ್ಯಗಳನ್ನು ಜಯಿಸಿದ್ದ ಆತಿಥೇಯ ತಂಡ 2–0 ರಲ್ಲಿ ಸರಣಿ ತನ್ನದಾಗಿಸಿಕೊಂಡಿತು. ಭಾರತ ತಂಡ ತನ್ನ ಮುಂದಿನ ಪಂದ್ಯದಲ್ಲಿ ಗುರುವಾರ ಆಸ್ಟ್ರೇಲಿಯಾ ‘ಎ’ ತಂಡವನ್ನು ಎದುರಿಸಲಿದೆ.

ಮೊದಲ ಎರಡು ಪಂದ್ಯಗಳಿಗೆ ಹೋಲಿಸಿದರೆ ಸವಿತಾ ಪೂನಿಯಾ ಬಳಗ ಅಂತಿಮ ಪಂದ್ಯದಲ್ಲಿ ಆಕ್ರಮಣಕಾರಿಯಾಗಿ ಆಡಿತು. ಮೊದಲ ಮತ್ತು ಮೂರನೇ ಕ್ವಾರ್ಟರ್‌ನ ಹೆಚ್ಚಿನ ಅವಧಿಯಲ್ಲಿ ಚೆಂಡಿನ ಮೇಲೆ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.