ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಕಿ: ರಾಷ್ಟ್ರೀಯ ಟೂರ್ನಿಗೆ ಕೊಡಗು ತಂಡ ಆಯ್ಕೆ

Published : 19 ಆಗಸ್ಟ್ 2024, 23:59 IST
Last Updated : 19 ಆಗಸ್ಟ್ 2024, 23:59 IST
ಫಾಲೋ ಮಾಡಿ
Comments

ಕುಶಾಲನಗರ: ಕೊಡಗು ಜಿಲ್ಲಾ ತಂಡವು ಬೆಂಗಳೂರಿನಲ್ಲಿ ಸೋಮವಾರ ನಡೆದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ಪುರುಷರ ಹಾಕಿ ಟೂರ್ನಿಯಲ್ಲಿ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಈ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಯಿತು.

ಶಾಂತಿನಗರದ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಕೊಡಗು ತಂಡವು ಬೀದರ್ ಜಿಲ್ಲಾ ತಂಡವನ್ನು 5-0 ಗೋಲುಗಳಿಂದ ಮಣಿಸಿತು. ವಿಜೇತ ತಂಡದ ಪರವಾಗಿ ಸತೀಶ್, ಶ್ರೀನಿವಾಸ್ ರೈ ,ಪೂಣಚ್ಚ, ಜಾಗೃತ್ , ಮಂಜುನಾಥ್ ತಲಾ ಒಂದೊಂದು ಗೋಲು ಗಳಿಸಿದರು. 

ಸೆಮಿಫೈನಲ್‌ನಲ್ಲಿ ಕೊಡಗು, ಬೆಂಗಳೂರು ನಗರ ತಂಡವನ್ನು 5-0 ಗೋಲುಗಳ ಅಂತರದಿಂದ ಮಣಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT