ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ ವಿಶ್ವಕಪ್‌ ಟೂರ್ನಿ: ಅರ್ಜೆಂಟೀನಾ– ದಕ್ಷಿಣ ಆಫ್ರಿ‍ಕಾ ಪೈಪೋಟಿ

Last Updated 12 ಜನವರಿ 2023, 19:32 IST
ಅಕ್ಷರ ಗಾತ್ರ

ಭುವನೇಶ್ವರ: ಹಾಕಿ ವಿಶ್ವಕಪ್‌ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅರ್ಜೆಂಟೀನಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಪೈಪೋಟಿ ನಡೆಸಲಿವೆ.

‘ಎ’ ಗುಂಪಿನ ಈ ಪಂದ್ಯ ಭುವನೇಶ್ವರದ ಕಳಿಂಗಾ ಕ್ರೀಡಾಂಗಣದಲ್ಲಿ ಶುಕ್ರವಾರ ಮಧ್ಯಾಹ್ನ 1ಕ್ಕೆ ಆರಂಭವಾಗಲಿದೆ.

ಇದೇ ಗುಂಪಿನ ಇನ್ನೊಂದು ಪಂದ್ಯದಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದೆನಿಸಿರುವ ಆಸ್ಟ್ರೇಲಿಯಾ ತಂಡ ಫ್ರಾನ್ಸ್‌ ವಿರುದ್ಧ ಸೆಣಸಾಡಲಿದೆ. ಆಸ್ಟ್ರೇಲಿಯಾ ಕಳೆದ ವಿಶ್ವಕಪ್‌ನಲ್ಲಿ ಕಂಚಿನ ಪದಕ ಗೆದ್ದುಕೊಂಡಿತ್ತು. ಸೆಮಿಫೈನಲ್‌ನಲ್ಲಿ ನೆದರ್ಲೆಂಡ್ಸ್‌ ಕೈಯಲ್ಲಿ ಸೋತಿದ್ದ ಕಾಂಗರೂ ನಾಡಿನ ತಂಡ, ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಗೆದ್ದಿತ್ತು.

ರೂರ್ಕೆಲಾದಲ್ಲಿ ನಡೆಯಲಿರುವ ‘ಡಿ’ ಗುಂಪಿನ ಪಂದ್ಯದಲ್ಲಿ ಇಂಗ್ಲೆಂಡ್‌ ಮತ್ತು ವೇಲ್ಸ್ ಎದುರಾಗಲಿವೆ.

ಕಳೆದ ಬಾರಿಯ ಚಾಂಪಿಯನ್‌ ಬೆಲ್ಜಿಯಂ ತಂಡ ಸತತ ಎರಡನೇ ಪ್ರಶಸ್ತಿಯ ಮೇಲೆ ಕಣ್ಣಿಟ್ಟು ತನ್ನ ಅಭಿಯಾನವನ್ನು ಶನಿವಾರ ಆರಂಭಿಸಲಿದೆ. ‘ಬಿ’ ಗುಂಪಿನ ಮೊದಲ ಪಂದ್ಯದಲ್ಲಿ ದಕ್ಷಿಣ ಕೊರಿಯಾ ತಂಡವನ್ನು ಎದುರಿಸಲಿದೆ.

44 ಪಂದ್ಯಗಳು: ಈ ಬಾರಿಯ ಟೂರ್ನಿಯಲ್ಲಿ ಒಟ್ಟು 44 ಪಂದ್ಯಗಳು ನಡೆಯಲಿವೆ. 24 ಪಂದ್ಯಗಳಿಗೆ ಕಳಿಂಗಾ ಕ್ರೀಡಾಂಗಣ ಆತಿಥ್ಯ ವಹಿಸಲಿದ್ದರೆ, ಇನ್ನುಳಿದ 20 ಪಂದ್ಯಗಳು ರೂರ್ಕೆಲಾದ ಬಿರ್ಸಾ ಮುಂಡಾ ಕ್ರೀಡಾಂಗಣದಲ್ಲಿ ಆಯೋಜನೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT