ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನ್‌ದೀಪ್ ಸಿಂಗ್ ರಕ್ತದಲ್ಲಿ ಆಮ್ಲಜನಕ ಪ್ರಮಾಣ ಕುಸಿತ: ಆಸ್ಪತ್ರೆಗೆ ದಾಖಲು

Last Updated 11 ಆಗಸ್ಟ್ 2020, 5:50 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ಸೋಂಕಿತ ಹಾಕಿ ಆಟಗಾರ ಮನ್‌ದೀಪ್ ಸಿಂಗ್ ರಕ್ತದಲ್ಲಿ ಆಮ್ಲಜನಕ ಪ್ರಮಾಣ ಕುಸಿತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ಮಂಗಳವಾರ ತಿಳಿಸಿದೆ.

ಸಿಂಗ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿತ್ತು. ಭಾರತೀಯ ಹಾಕಿ ತಂಡದಲ್ಲಿ ಕೊರೊನಾ ಸೋಂಕು ತಗುಲಿದ ಆರನೇ ಆಟಗಾರರಾಗಿದದ್ದಾರೆ ಸಿಂಗ್. ಹಾಕಿ ತಂಡದ ನಾಯಕ ಮನ್‌ಪ್ರೀತ್ ಸಿಂಗ್, ಇತರ ಆಟಗಾರರಾದ ಸುರೇಂದರ್ ಕುಮಾರ್, ಜಸ್‌ಕರನ್ ಸಿಂಗ್, ವರುಣ್ ಕುಮಾರ್ ಮತ್ತು ಕೃಷ್ಣ ಬಿ. ಪಾಠಕ್ ಅವರಿಗೂ ಸೋಂಕು ತಗುಲಿದೆ.

ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್‌ನಲ್ಲಿರುವ ಸೋಂಕಿತ ಆಟಗಾರರನ್ನು ದಿನಕ್ಕೆ ನಾಲ್ಕು ಬಾರಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಸೋಮವಾರ ರಾತ್ರಿಯ ತಪಾಸಣೆ ವೇಳೆ ಮನ್‌ದೀಪ್ ಸಿಂಗ್ ಅವರ ರಕ್ತದಲ್ಲಿ ಆಮ್ಲಜನಕ ಪ್ರಮಾಣ ನಿಗದಿತ ಮಟ್ಟಕ್ಕಿಂತ ಕಡಿಮೆಯಾಗುತ್ತಿರುವುದು ಕಂಡುಬಂದಿತ್ತು. ಇದು ಅವರಲ್ಲಿ ಕೊರೊನಾ ಲಕ್ಷಣಗಳು ತೀವ್ರಗೊಳ್ಳುತ್ತಿರುವ ಸೂಚನೆಯಾಗಿತ್ತು. ಹಾಗಾಗಿ ತಕ್ಷಣವೇ ಅವರನ್ನು ಎಸ್ಎಸ್‌ ಸ್ಪರ್ಷ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್‌ಗೆ ದಾಖಲಿಸಲಾಯಿತು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT