ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಐಎಚ್‌ ಪ್ರೊ ಲೀಗ್‌: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಗೆಲುವಿನ ವಿಶ್ವಾಸ

Last Updated 11 ಮಾರ್ಚ್ 2023, 19:45 IST
ಅಕ್ಷರ ಗಾತ್ರ

ರೂರ್ಕೆಲಾ: ಮೊದಲ ಪಂದ್ಯದಲ್ಲಿ ವಿಶ್ವ ಚಾಂಪಿಯನ್‌ ಜರ್ಮನಿ ತಂಡಕ್ಕೆ ಆಘಾತ ನೀಡಿ ಆತ್ಮವಿಶ್ವಾಸದಲ್ಲಿರುವ ಭಾರತ ಹಾಕಿ ತಂಡವು ಭಾನುವಾರ ಆಸ್ಟ್ರೇಲಿಯಾ ತಂಡದ ಸವಾಲು ಎದುರಿಸಲಿದೆ.

ಎಫ್‌ಐಎಚ್‌ ಪ್ರೊ ಲೀಗ್‌ ಟೂರ್ನಿಯ ಪಂದ್ಯವು ಇಲ್ಲಿ ನಡೆಯಲಿದ್ದು, ಹರ್ಮನ್‌ಪ್ರೀತ್ ಸಿಂಗ್‌ ನಾಯಕತ್ವದ ಭಾರತ ಮತ್ತೊಂದು ಜಯದ ನಿರೀಕ್ಷೆಯಲ್ಲಿದೆ.

ಶುಕ್ರವಾರ ಇಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ 3–2 ಗೋಲುಗಳ ಅಂತರದಿಂದ ಜರ್ಮನಿ ತಂಡವನ್ನು ಮಣಿಸಿತ್ತು. ಸುಖಜೀತ್ ಸಿಂಗ್‌ ಎರಡು ಗೋಲು ಗಳಿಸಿ ಗೆಲುವಿನ ರೂವಾರಿ ಎನಿಸಿದ್ದರು.

ಜರ್ಮನಿಗೆ ಜಯ: ಶನಿವಾರ ನಡೆದ ಪಂದ್ಯದಲ್ಲಿ ಜರ್ಮನಿ ತಂಡವು 1–0ಯಿಂದ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿತು. ವಿಜೇತ ತಂಡದ ಪರ ಎಂಟನೇ ನಿಮಿಷದಲ್ಲಿ ಮಲ್ಟೆ ಹೆಲ್‌ವಿಗ್ ಗೋಲು ಗಳಿಸಿದರು.

ಭಾರತ–ಆಸ್ಟ್ರೇಲಿಯಾ ಪಂದ್ಯ ಆರಂಭ: ರಾತ್ರಿ 7.30

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT