ನವದೆಹಲಿ: ಹಾಕಿ ಆಟಗಾರ ಮನ್ದೀಪ್ ಸಿಂಗ್ ಅವರಿಗೆ ಕೋವಿಡ್–19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್ಎಐ) ತಿಳಿಸಿದೆ.

ಅವರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಇತರ ಐವರು ಸೋಂಕಿತ ಆಟಗಾರರೊಂದಿಗೆ ಬೆಂಗಳೂರಿನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಾಧಿಕಾರ ಹೇಳಿದೆ. ಬೆಂಗಳೂರಿನ ಎಸ್ಎಐ ಕೇಂದ್ರದಲ್ಲಿ ರಾಷ್ಟ್ರೀಯ ಶಿಬಿರವು ಆಗಸ್ಟ್ 20ರಿಂದ ಆರಂಭವಾಗಬೇಕಿದೆ.

‘ಬೆಂಗಳೂರಿನಲ್ಲಿರುವ ಎಸ್ಎಐ ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್ನಲ್ಲಿರುವ ಇತರ 20 ಆಟಗಾರರ ಜತೆ ಭಾರತದ ಪುರುಷರ ಹಾಕಿ ತಂಡದ ಆಟಗಾರ ಮನ್ದೀಪ್ ಅವರನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿ ಪಾಸಿಟಿವ್ ಬಂದಿದೆ. ಆದರೆ ಅವರಿಗೆ ರೋಗ ಲಕ್ಷಣಗಳಿಲ್ಲ’ ಎಂದು ಎಸ್ಎಐ ಪ್ರಕಟಣೆ ತಿಳಿಸಿದೆ.

ಹಾಕಿ ತಂಡದ ನಾಯಕ ಮನ್ಪ್ರೀತ್ ಸಿಂಗ್ ಮತ್ತು ಇತರ ನಾಲ್ವರು ಆಟಗಾರರಿಗೆ ಕೋವಿಡ್ ತಗುಲಿರುವುದು ಕಳೆದ ವಾರ ದೃಢಪಟ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.