ಪ್ಯಾರಿಸ್: ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 50 ಕೆ.ಜಿ ವಿಭಾಗದಲ್ಲಿ ಭಾರತದ ಕುಸ್ತಿಪಟು ವಿನೇಶಾ ಫೋಗಾಟ್ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದಾರೆ.
ಇಂದು ನಡೆದ ಮೊದಲ ಸುತ್ತಿನಲ್ಲಿ ಕಳೆದ ವರ್ಷದ ಒಲಿಂಪಿಕ್ಸ್ ಚಾಂಪಿಯನ್ ಮತ್ತು ನಾಲ್ಕು ಬಾರಿಯ ವಿಶ್ವ ಚಾಂಪಿಯನ್, ಜಪಾನಿನ ಯುಇ ಸುಸಾಕಿ ಅವರನ್ನು ಫೋಗಾಟ್ ಮಣಿಸಿದರು.
ಮೊದಲ ಸುತ್ತಿನಲ್ಲೇ ವಿನೇಶಾ ಅವರಿಗೆ ಅತ್ಯಂತ ಕಠಿಣ ಸವಾಲು ಎದುರಾಗಿತ್ತು. ಆದರೆ ರೋಚಕ ಹಣಾಹಣಿಯಲ್ಲಿ 3-2ರ ಅಂತರದಲ್ಲಿ ಗೆಲುವು ಸಾಧಿಸುವಲ್ಲಿ ವಿನೇಶಾ ಯಶಸ್ವಿಯಾಗಿದ್ದಾರೆ.
ಕೊನೆಯ ನಿಮಿಷದಲ್ಲಿ ಅದ್ಭುತ ಪ್ರದರ್ಶನ ತೋರಿದ ವಿನೇಶಾ, ಎದುರಾಳಿ ವಿರುದ್ಧ ಮೇಲುಗೈ ಸಾಧಿಸಿದ್ದಾರೆ.
ಕೆಲವೇ ಹೊತ್ತಿನಲ್ಲಿ ವಿನೇಶಾ ಅವರು ಕ್ವಾರ್ಟರ್ ಫೈನಲ್‌ನಲ್ಲಿ ಮತ್ತೆ ಕಣಕ್ಕಿಳಿಯಲಿದ್ದಾರೆ.