ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೊನೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್, ಪ್ರಿಯಾಂಶು ನಿರ್ಗಮನ

Published 25 ಜನವರಿ 2024, 22:44 IST
Last Updated 25 ಜನವರಿ 2024, 22:44 IST
ಅಕ್ಷರ ಗಾತ್ರ

ಜಕಾರ್ತಾ: ಭಾರತದ ಲಕ್ಷ್ಮ ಸೇನ್ ಮತ್ತು ಪ್ರಿಯಾಂಶು ರಾಜಾವತ್‌ ಅವರು ಇಂಡೊನೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಸಿಂಗಲ್ಸ್‌ನ ಪ್ರಿ ಕ್ವಾರ್ಟರ್‌ ಫೈನಲ್‌ನಲ್ಲಿ ಸೋಲು ಅನುಭವಿಸಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಎಂಟನೇ ಶ್ರೇಯಾಂಕಿತ ಡೆನ್ಮಾರ್ಕ್‌ನ ಆಂಡರ್ಸ್ ಆಂಟೊನ್ಸೆನ್ ವಿರುದ್ಧ ಪ್ರಬಲ ಹೋರಾಟ ನಡೆಸಿದ ವಿಶ್ವ ಕ್ರಮಾಂಕದಲ್ಲಿ 19ನೇ ಸ್ಥಾನದಲ್ಲಿರುವ ಸೇನ್ 19-21, 18-21 ಅಂತರದಲ್ಲಿ ಸೋತರು. ಅವರು ಆರಂಭಿಕ ಸುತ್ತಿನಲ್ಲಿ ಚೀನಾದ ವೆಂಗ್ ಹಾಂಗ್ ಯಾಂಗ್ ಅವರನ್ನು 24-22, 21-15 ಅಂತರದಿಂದ ಸೋಲಿಸಿದ್ದರು.

ಕೆನಡಾ ವಿರುದ್ಧದ ಆರಂಭಿಕ ಪಂದ್ಯದಲ್ಲಿ ರಾಜಾವತ್‌ ಉತ್ತಮ ಪ್ರದರ್ಶನ ನೀಡಿದರೂ, ಅವರು 18-21, 14-21 ರಿಂದ ಸೋತರು 

ಟೂರ್ನಿಯಲ್ಲಿ ಉಳಿದಿರುವ ಏಕೈಕ ಭಾರತೀಯ ಕಿರಣ್‌ ಜಾಜ್‌ ಅವರು ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಚೀನಾದ ಲು ಗುವಾಂಗ್ಜು ಅವರನ್ನು ಎದುರಿಸಲಿದ್ದಾರೆ. ಅವರು ಆರಂಭಿಕ ಸುತ್ತಿನಲ್ಲಿ ಫ್ರಾನ್ಸ್‌‌ನ  ತೊಮಾ ಜೂನಿಯರ್ ಪೊಪಯ್‌ ವಿರುದ್ಧ 18-21, 21-16, 21-19 ಅಂತರದಲ್ಲಿ ಗೆಲುವು ಸಾಧಿಸಿದರು.

ಏಪ್ರಿಲ್ ಅಂತ್ಯದೊಳಗೆ ಮೊದಲ 16 ಕ್ರಮಾಂಕಗಳಲ್ಲಿ ಸ್ಥಾನ ಪಡೆದರೆ ಮಾತ್ರ ಆ ಆಟಗಾರ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಸಾಧ್ಯವಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT