ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿನ್ ಮಸ್ರೊ ನಿವೃತ್ತಿ

Published 11 ಮೇ 2024, 4:15 IST
Last Updated 11 ಮೇ 2024, 4:15 IST
ಅಕ್ಷರ ಗಾತ್ರ

ಕ್ರೈಸ್ಟ್‌ಚರ್ಚ್: ಟಿ20 ವಿಶ್ವಕಪ್‌ಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾದ ನ್ಯೂಜಿಲೆಂಡ್‌ನ ಅಗ್ರ ಕ್ರಮಾಂಕದ ಬ್ಯಾಟರ್ ಕಾಲಿನ್ ಮನ್ರೊ ಶುಕ್ರವಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

37 ವರ್ಷದ ಮನ್ರೊ ಕಿವೀಸ್‌ ತಂಡದ ಪರ ಒಂದು ಟೆಸ್ಟ್, 57 ಏಕದಿನ ಮತ್ತು 65 ಟಿ20 ಪಂದ್ಯಗಳನ್ನು ಆಡಿ ಒಟ್ಟು 3,010 ರನ್‌ ಗಳಿಸಿದ್ದಾರೆ. ಅವರು ಟಿ20 ಮಾದರಿಯಲ್ಲಿ ಸ್ಫೋಟಕ ಬ್ಯಾಟಿಂಗ್‌ ಮೂಲಕ ಜನಪ್ರಿಯರಾಗಿದ್ದರು.

ಈತನಕ 428 ಟಿ20 ಪಂದ್ಯಗಳನ್ನು ಆಡಿರುವ ಅವರು 30.44 ಸರಾಸರಿಯಲ್ಲಿ 10,961 ರನ್‌ ಗಳಿಸಿದ್ದಾರೆ. ಅವರು 2020ರಲ್ಲಿ ಭಾರತ ವಿರುದ್ಧದ ಟಿ20 ಪಂದ್ಯದಲ್ಲಿ ರಾಷ್ಟ್ರೀಯ ತಂಡದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT